ಬೆಂಗಳೂರು: ಬೆಂಗಳೂರಿನ ಟಿ. ದಾಸರಹಳ್ಳಿಯಲ್ಲಿ ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಮಗನ ಮೇಲೆ ತಂದೆ ಕೆಮಿಕಲ್ ಮಿಶ್ರಿತ ಆ್ಯಸಿಡ್ ದಾಳಿ ಮಾಡಿರುವ ಘಟನೆ ನಡೆದಿದೆ. ಆರೋಪಿ ರಾಮಕೃಷ್ಣಯ್ಯ ನಿವೃತ್ತ ಪಿಎಸ್‌ಐ ಆಗಿದ್ದಾರೆ.
ಆ್ಯಸಿಡ್ ದಾಳಿಯಿಂದ ಕಿರಣ್ ಅವರ ಒಂದು ಕಣ್ಣಿಗೆ ಮತ್ತು ದೇಹಕ್ಕೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ದೃಷ್ಟಿ ಬರುವುದು ಡೌಟು ಎಂದು ನಾರಾಯಣ ನೇತ್ರಾಲಯದ ವೈದ್ಯರು ಹೇಳಿದ್ದಾರೆ. ಮಾರ್ಚ್ 25 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ನಿವೃತ್ತ ಪಿಎಸ್‌ಐ ರಾಮಕೃಷ್ಣಯ್ಯ ಈ ಕೃತ್ಯ ಎಸಗಿದ್ದು ಅವರ ಜೊತೆ ಅಣ್ಣ ಉಪೇಂದ್ರ ಕುಮಾರ್, ಅಕ್ಕ ಕಲಾವತಿಯೂ ಸೇರಿರುವ ಆರೋಪ ಮಾಡಲಾಗಿದೆ. ಸದ್ಯ ಆರೋಪಿಗಳ ಪತ್ತೆಗಾಗಿ ಬಾಗಲಗುಂಟೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


