ಹಾಸನ: ಹಿಟ್ ಆ್ಯಂಡ್ ರನ್ ಗೆ ಮಾವ ಮತ್ತು ಅಳಿಯ ಬಳಿಯಾದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬೈಪಾಸ್ನಲ್ಲಿ ನಡೆದಿದೆ.
ಅರಸೀಕೆರೆ ತಾಲೂಕಿನ ನಾಗೇನಹಳ್ಳಿ ನಿವಾಸಿ ಮಧು(35) ಹಾಗೂ ಬೇಲೂರು ತಾಲೂಕಿನ ದೇವಿಹಳ್ಳಿ ನಿವಾಸಿ ಜವರಯ್ಯ(65) ಮೃತ ರ್ದುದೈವಿಗಳು.
ಬೆಂಗಳೂರಿನಿಂದ ಮಾವ, ಪತ್ನಿ ಜೊತೆ ಕಾರಿನಲ್ಲಿ ಬರುತ್ತಿದ್ದ ಮಧು, ಶೆಟ್ಟಿಹಳ್ಳಿ ಬೈಪಾಸ್ನಲ್ಲಿ ಕಾರಿನ ಟೈರ್ ಪಂಚರ್ ಆದ ಹಿನ್ನೆಲೆ ಟೈರ್ ಬದಲಾಯಿಸುವಾಗ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ.
ಮಧು ಸ್ಥಳದಲ್ಲೇ ಸಾವನ್ನಪ್ಪಿದರೆ, ತೀವ್ರವಾಗಿ ಗಾಯಗೊಂಡಿದ್ದ ಜವರಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಧು ಪತ್ನಿ ಗೀತಾಗೆ ಚನ್ನರಾಯಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇತ್ತ ಲಾರಿ ನಿಲ್ಲಿಸದೆ ಚಾಲಕ ಎಸ್ಕೇಪ್ ಆಗಿದ್ದಾನೆ. ಈ ಕುರಿತು ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


