ಪ್ರಧಾನಿ ನರೇಂದ್ರ ಮೋದಿ ಹಿಂದುಳಿದ ವರ್ಗದ ನೇತಾರರಾಗಿದ್ದು, ಈ ವಿಚಾರವನ್ನು ಬಿಜೆಪಿ ನಾಯಕರು ಬಹಿರಂಗವಾಗಿ ಹೇಳುವ ಕಾಲ ಇದಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ, ಜಾತಿ ವಿಚಾರವನ್ನು ಬಿಜೆಪಿಯವರಾದ ನಾವೇ ಮುಚ್ಚಿಡುತ್ತಿದ್ದೇವೆ. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ನಾವು ಸತ್ಯ ಸಂಗತಿಯನ್ನು ಧೈರ್ಯವಾಗಿ ಹೇಳಬೇಕು. ಆದರೆ ಸಿದ್ದರಾಮಯ್ಯ ಅವರಂತಹವರು ನಾವೇ ಹಿಂದುಳಿದ ವರ್ಗದ ಚಾಂಪಿಯನ್ ಎಂದು ಹೇಳುತ್ತಿದ್ದಾರೆ. ಆದರೆ ನಾವು ಹೇಳುತ್ತಿಲ್ಲ ಎಂದರು.
ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದಿಂದ ಜೆಪಿ ನಗರದ ಆರ್.ವಿ.ಡೆಂಟಲ್ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಬೃಹತ್ ಸಾಮಾಜಿಕ ಸಮ್ಮೇಳನ ನಡೆಯಿತು.
ವಿಪಕ್ಷ ನಾಯಕ ಆರ್.ಅಶೋಕ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ, ಶಾಸಕರಾದ ಸಿ. ಕೆ. ರಾಮಮೂರ್ತಿ, ರವಿ ಸುಬ್ರಮಣ್ಯ, ಗೋಪಿನಾಥ್ ರೆಡ್ಡಿ, ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ, ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ಹಿಂದುಳಿದ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


