ಸುಟ್ಟ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹವು ಪತ್ತೆಯಾಗಿದ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿಯ ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206ರ ಪಕ್ಕದಲ್ಲಿ ಘಟನೆ ನಡೆದಿದೆ.
ಸುಮಾರು 25 ವರ್ಷದ ಯುವತಿಯನ್ನು ಕೊಲೆ ಮಾಡಿ ಬಳಿಕ ಗುರುತು ಸಿಗಬಾರೆಂದು ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ಅರ್ಧಂಬರ್ಧ ಸುಟ್ಟಿರುವ ಯುವತಿ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಯುವತಿ ಮುಖವು ಸಂಪೂರ್ಣ ಸುಟ್ಟು ಹೋಗಿದ್ದು, ಗುರುತು ಪತ್ತೆ ಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಸದ್ಯ ಚೇಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ವರದಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296