nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    May 3, 2026
    Facebook Twitter Instagram
    ಟ್ರೆಂಡಿಂಗ್
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    • ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ
    • ಹೇಮಾವತಿ ಲಿಂಕ್ ಕೆನಾಲ್‌ ಗೆ ನಾನು ವಿರೋಧಿ: ಶಾಸಕ ಎಸ್.ಆರ್. ಶ್ರೀನಿವಾಸ್
    • ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಜಯಣ್ಣ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಂಡಸಿರಿಗೂ ಬಂದೆ ಬಿಡ್ತು ಸ್ತನ ಕ್ಯಾನ್ಸರ್‌: ಭೀಕರ ಕಾಯಿಲೆಯ ಲಕ್ಷಣಗಳೇನು?
    ರಾಜ್ಯ ಸುದ್ದಿ April 2, 2024

    ಗಂಡಸಿರಿಗೂ ಬಂದೆ ಬಿಡ್ತು ಸ್ತನ ಕ್ಯಾನ್ಸರ್‌: ಭೀಕರ ಕಾಯಿಲೆಯ ಲಕ್ಷಣಗಳೇನು?

    By adminApril 2, 2024No Comments2 Mins Read
    cancer

    ಸಾಮಾನ್ಯವಾಗಿ ಸ್ತನ ಕ್ಯಾನ್ಸರ್‌ ಅಂದಾಕ್ಷಣ ಹೆಂಗಸರಿಗೆ ಬರುವ ಭೀಕರ ಕಾಯಿಲೆ ಎಂದು ಹೇಳಲಾಗುತ್ತಿತ್ತು. ಆದರೆ ಈ ಸಮಸ್ಯೆ ಪುರುಷರನ್ನೂ ಬಾಧಿಸುತ್ತಿದೆ ಎನ್ನುವ ಅಂಶ ಇದೀಗ ಬೆಳಕಿಗೆ ಬಂದಿದೆ.

    ಅಮೆರಿಕದಂಥ ದೇಶಗಳಲ್ಲಿ ನೂರು ಸ್ತನ ಕ್ಯಾನ್ಸರ್‌ ಪ್ರಕರಣಗಳಲ್ಲಿ ಒಬ್ಬರು ಪುರುಷರಿದ್ದಾರೆ ಎನ್ನುತ್ತವೆ ಅಂಕಿ-ಅಂಶಗಳು. ಹೀಗಾಗಿ ಪ್ರಕರಣಗಳು ಅಪರೂಪ ಎನಿಸಿದರೂ, ಬೆಳಕಿಗೆ ಬರುತ್ತಲೇ ಇವೆ. ಭಾರತದಲ್ಲಿ ಈ ಸಮಸ್ಯೆ ಸಣ್ಣ ಪ್ರಾಯದವರನ್ನೂ ಬಾಧಿಸುತ್ತಿದ್ದು, ರೋಗ ತೀವ್ರವಾಗಿಯೂ ಇರುತ್ತದೆ ಎಂಬುದಾಗಿ ತಜ್ಞರು ಕೂಡ ಅಭಿಪ್ರಾಯ ಪಟ್ಟಿದ್ದಾರೆ.


    Provided by
    Provided by

    ಸಾಮಾನ್ಯವಾಗಿ ಇದು ಮಹಿಳೆಯರಿಗೆ ಹೇಗೆ ಕಾಣಿಸಿಕೊಳ್ಳುತ್ತದೆ, ಅದೇ ರೀತಿ ಇರುತ್ತದೆ ಎಂದು ಹೇಳಲಾಗಿದೆ. ಮೊದಲನೆಯದಾಗಿ ಸ್ತನದ ಅಂಗಾಂಶಗಳಲ್ಲಿ ವ್ಯತ್ಯಾಸ ಕಾಣುತ್ತವೆ ಎಂದು ಹೇಳಲಾಗಿದೆ. ಎರಡನೆಯದಾಗಿ ನೋವು ಸಹಿತ ಅಥವಾ ನೋವಿಲ್ಲದಂಥ ಗಡ್ಡೆಗಳು ಕಂಡುಬರಬಹುದು, ಮೂರನೆಯದಾಗಿ ಅಸ್ವಾಭಾವಿಕವಾಗಿ ಗಾತ್ರ ಹಿಗ್ಗಬಹುದು, ನಾಲ್ಕನೆಯದಾಗಿ ಚರ್ಮದ ಬಣ್ಣದಲ್ಲಿ ವ್ಯತ್ಯಾಸ ಕಾಣಬಹುದು, ಐದನೆಯದಾಗಿ ಸ್ತನದ ತೊಟ್ಟುಗಳು ಒಳ ಸರಿಯಬಹುದು, ಆರನೆಯದಾಗಿ ತೊಟ್ಟುಗಳಿಂದ ದ್ರವ ಒಸರಬಹುದು ಹಾಗೂ ತೋಳಿನ ಅಡಿಗಿನ ಸ್ವೇದ ಗ್ರಂಥಿಗಳು ಹಿಗ್ಗಬಹುದು, ಕಂಕುಳಿನಲ್ಲಿ ಗಡ್ಡೆಗಳು ಕಾಣಬಹುದು. ಇಂಥ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ, ಪುರುಷರು ಸಹ ವೈದ್ಯರ ಬಳಿ ತಪಾಸಣೆಗೆ ಹೋಗುವುದು ಅನಿವಾರ್ಯವಾಗಿದೆ.

    ಮಹಿಳೆಯರಲ್ಲಿ ಕಂಡಂತೆ, ಪುರುಷರಲ್ಲೂ ಇದಕ್ಕೆ ಹಲವಾರು ಕಾರಣಗಳನ್ನು ವೈದ್ಯ ವಿಜ್ಞಾನ ಪಟ್ಟಿ ಮಾಡುತ್ತದೆ. ಸ್ತನ ಕ್ಯಾನ್ಸರ್‌ನ ಸಮಸ್ಯೆ ಅನುವಂಶಿಕವಾಗಿ ಇದ್ದಲ್ಲಿ, ವಯಸ್ಸು ಹೆಚ್ಚಿದ್ದಲ್ಲಿ, ಬಿಆರ್‌ಸಿಎ೨ ನಂಥ ವಂಶವಾಹಿಯ ಬದಲಾವಣೆ ಅನುವಂಶೀಯವಾಗಿ ಬಂದಿದ್ದರೆ, ಹಾರ್ಮೋನಿನ ಅಸಮತೋಲನ, ಬೊಜ್ಜು- ಅತಿತೂಕ, ಯಕೃತ್ತಿನ ಸಮಸ್ಯೆಗಳು- ಇಂಥ ಎಲ್ಲ ಸಮಸ್ಯೆಗಳು ಪುರುಷರಲ್ಲಿ ಸ್ತನ ಕ್ಯಾನ್ಸರ್‌ ಬರುವುದಕ್ಕೆ ಮೂಲವಾಗಬಹುದು.

    ಈ ರೋಗ ಪುರುಷರಲ್ಲಿ ಅಪರೂಪವಾದರೂ, ಅಸಹಜವಲ್ಲ. ಹಾಗಾಗಿ ಈ ಬಗ್ಗೆ ಅರಿವು ಹೆಚ್ಚಿಸುವುದು, ಜಾಗೃತಿ ಮೂಡಿಸುವುದು ಮುಖ್ಯವಾಗಿ ಆಗಬೇಕಿದೆ. ದೇಹದ ಉಳಿದೆಲ್ಲ ಅಂಗಗಳಿಗೆ ರೋಗ ಬಂದಂತೆಯೆ, ಇಲ್ಲಿಯೂ ಬರಬಹುದು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಯಾವುದೇ ಲಕ್ಷಣಗಳು ಕಂಡರೂ ಅದನ್ನು ಕಡೆಗಣನೆ ಮಾಡದೇ ವೈದ್ಯರಲ್ಲಿ ಸಲಹೆ ಕೇಳುವುದು ಸೂಕ್ತ. ಅದರಲ್ಲೂ ಆನುವಂಶಿಕವಾಗಿ ಈ ಸಮಸ್ಯೆಗಳಿದ್ದರೆ, ಇನ್ನಷ್ಟು ಜಾಗೃತರಾಗಿ ಇರುವುದು ಅಗತ್ಯ. ಈ ಬಗ್ಗೆ ಕುಟುಂಬದ ಸದಸ್ಯರಲ್ಲೂ ತಿಳುವಳಿಕೆಯಿದ್ದರೆ, ತೊಂದರೆಯನ್ನು ನಿರ್ವಹಿಸುವುದು ಕಷ್ಟವಾಗದು. ಆರಂಭಿಕ ಹಂತದಲ್ಲಿ ಪತ್ತೆಯಾಗಿ, ಬೇಗನೆ ಚಿಕಿತ್ಸೆ ದೊರೆತಷ್ಟೂ ಪ್ರಾಣ ಉಳಿಯುವ ಸಾಧ್ಯತೆ ಹೆಚ್ಚಾಗಿರುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

     

    admin
    • Website

    Related Posts

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಬಾಗಲಕೋಟೆ: ರಾಜ್ಯ ರಾಜಕೀಯದ ಕುತೂಹಲಕ್ಕೆ ಕಾರಣವಾಗಿದ್ದ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು…

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    May 3, 2026

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.