ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರಿಂದು, ಎತ್ತಿನ ಗಾಡಿ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ಪ್ರಾರಂಭಿಕವಾಗಿ ನಗರದ ಟೌನ್ ಹಾಲ್ ವೃತ್ತದ ಬಳಿ ಜಮಾಯಿಸಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಈ ಮೆರವಣಿಗೆಗೆ ಸಾಕ್ಷಿಯಾದರು.

ಮೊದಲಿಗೆ ಸ್ವಲ್ಪ ದೂರ ಎತ್ತಿನಗಾಡಿಯಲ್ಲಿ ಸಚಿವರಾದ ಪರಮೇಶ್ವರ್ ಹಾಗೂ ಕೆ.ಎನ್. ರಾಜಣ್ಣ ಹಾಗೂ ಅಭ್ಯರ್ಥಿ ಮುದ್ದಹನುಮೇಗೌಡ ಸಾಗಿದರು. ಬಿಜಿಎಸ್ ಸರ್ಕಲ್ ನಿಂದ ಡಿಸಿ ಕಚೇರಿವರೆಗೆ ಬೃಹತ್ ರ್ಯಾಲಿ ನಡೆಸಲಾಯಿತು.
ನಂತರ ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಯೂ ಆಗಿರುವ ಶುಭಾ ಕಲ್ಯಾಣ್ ಗೆ ಉಮೇದುವಾರಿಕೆ ಸಲ್ಲಿಸಿದರು.
ಸಚಿವರಾದ ಜಿ.ಪರಮೇಶ್ವರ್, ಕೆ.ಎನ್. ರಾಜಣ್ಣ, ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್, ಮುದ್ದಹನುಮೇಗೌಡರಿಗೆ ಸಾಥ್ ನೀಡಿದರು.
ಮೆರವಣಿಗೆಯಲ್ಲಿ ಕಲಾತಂಡಗಳು ಗಮನ ಸೆಳೆದವು. ಡೊಳ್ಳುಕುಣಿತ, ಗಾರುಡಿ ಗೊಂಬೆ ಕುಣಿತ, ನಾಸಿಕ್ ಡೋಲ್, ವೀರಗಾಸೆ ನೃತ್ಯ ಪ್ರದರ್ಶನ ವ್ಯವಸ್ಥೆ ಮಾಡಲಾಗಿತ್ತು. ಪಿರಮಿಡ್ ರಚಿಸಿ ಕಾಂಗ್ರೆಸ್ ಬಾವುಟವನ್ನು ಡೊಳ್ಳು ಕುಣಿತ ತಂಡ ಹಾರಿಸಿತು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


