ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ ನನ್ನು ಜೀವಂತವಾಗಿ ಹೊರ ತೆಗೆಯಲು ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದವರು ತಮ್ಮ ಜೀವವನ್ನೇ ಪಣಕ್ಕಿಟ್ಟು ಮಗುವನ್ನು ಸುರಕ್ಷಿತವಾಗಿ ಹೊರಗೆ ತಂದಿರುವುದು ನಿಜಕ್ಕೂ ಶ್ಲಾಘನೀಯ ಎಂದು ನೈಜ ಹೋರಾಟಗಾರರ ವೇದಿಕೆ, ಬೆಂಗಳೂರು ಮೆಚ್ಚುಗೆ ವ್ಯಕ್ತಪಡಿಸಿದೆ.
ಗ್ರಾಮದಲ್ಲಿ ಎರಡು ವರ್ಷದ ಮಗು (ಬೋರ್ ವೆಲ್) ಕೊಳವೆ ಬಾವಿಗೆ ಬಿದ್ದ ನಂತರ ಮಗುವನ್ನು ಸುರಕ್ಷಿತವಾಗಿ ಹೊರಗೆ ತರುವಲ್ಲಿ NDRF, SDRF, ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ವರ್ಗ ಶ್ರಮಿಸಿದ್ದಾರೆ ಇವರಿಗೆ ನೈಜ ಹೋರಾಟಗಾರರ ವೇದಿಕೆ ತುಂಬು ಹೃದಯದ ಕೃತಜ್ಞತೆಯನ್ನು ಸಲ್ಲಿಸುತ್ತದೆ ಎಂದು ನೈಜ ಹೋರಾಟಗಾರರ ವೇದಿಕೆಯ ಹೆಚ್.ಎಂ.ವೆಂಕಟೇಶ್, ಕುಣಿಗಲ್ ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


