ಬೆಂಗಳೂರು: ವೃದ್ದನೊಬ್ಬನ ಮೇಲೆ ಕೆಎಸ್ ಆರ್ ಟಿಸಿ ಬಸ್ ಹರಿದು ವೃದ್ದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನಡೆದಿದೆ. ಗಂಗಾರೆಡ್ಡಿ (85) ಮೃತ ದುರ್ದೈವಿಯಾಗಿದ್ದಾರೆ.
ಇಂದು ಮಧ್ಯಾಹ್ನ 12.30ರ ಸುಮಾರಿನಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಆಂಧ್ರದ ಚಿತ್ತೂರಿಗೆ ತೆರಳಲು ಮೆಜೆಸ್ಟಿಕ್ಗೆ ಬಂದಿದ್ದ ವೃದ್ಧನಿಗೆ ಚಿಕ್ಕಮಗಳೂರಿಂದ ಬೆಂಗಳೂರಿಗೆ ಬಂದಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಗಂಗಾರೆಡ್ಡಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಉಪ್ಪಾರ ಪೇಟೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


