ಕೋಲಾರ: ಕೋಲಾರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ನರೇಂದ್ರ ಮೋದಿ ಅವರನ್ನು ಕೆಳಗಿಳಿಸಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡಬೇಕು” ಎಂದು ಹೇಳಿದ್ದಾರೆ.
“ನಾವು ಮತ್ತೆ ೨೫ ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು. ನಾವು ತಂದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಜೆಪಿಯವರು ಹೇಳಿದರು. ಆದರೆ ಆ ರೀತಿ ಆಗಲಿಲ್ಲ ಹಾಗಾಗಿ ಮುಂದಿನ ವರ್ಷಗಳವರೆಗೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತಹ ಐದು ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ” ಎಂದು ತಿಳಿಸಿದರು.
“ನಾವು ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೇವೆ. ಗ್ಯಾರೆಂಟಿ ಯೋಜನೆಗಳಿಂದ ಖಜಾನೆ ಖಾಲಿ ಎಂದು ಬಿಜೆಪಿ ಹೇಳಿತ್ತು. ಮುಂದಿನ ವರ್ಷಕ್ಕೂ ಗ್ಯಾರಂಟಿ ಯೋಜನೆಗೆ ಹಣ ಮೀಸಲಿಟ್ಟಿದ್ದೇವೆ. ಬಿಜೆಪಿಯವರು ಹೇಳಿದ್ದು ಎಲ್ಲವೂ ಸುಳ್ಳು. ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರೆಯುತ್ತದೆ. ಹೀಗಾಗಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಕಿತ್ತೊಗೆಯಬೇಕು ಮೋದಿಯನ್ನು ಇಳಿಸಿ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಬೇಕು” ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


