ಚಾಲಕನ ನಿಯಂತ್ರಣ ತಪ್ಪಿ, ಖಾಸಗಿ ಬಸ್ ವೊಂದು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಬಳಿ ಕೆರೆಗೆ ಇಳಿದಿದೆ. ಕೆರೆಯಲ್ಲಿ ನೀರು ಇಲ್ಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಖಾಸಗಿ ಬಸ್ ಆನವಟ್ಟಿಯಿಂದ ಸೊರಬಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಬಸ್ ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಅಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ರಸ್ತೆ ತಿರುವು ಇದ್ದ ಕಾರಣ ಚಾಲಕ ನಿಯಂತ್ರಣ ತಪ್ಪಿದ್ದು, ನೇರವಾಗಿ ಕೆರೆಗೆ ಇಳಿದಿದೆ. ಬಸ್ ನ ಮುಂಭಾಗ ಹಾನಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


