RCB ಸೋಲಿಗೆ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಅವರೇ ಕಾರಣ ಎನ್ನುವಂತೆ ಅಸಭ್ಯ ಪದ ಬಳಸಿ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ದೂರು ದಾಖಲಾದರೂ ಭಾರೀ ಆಕ್ರೋಶ ಕೇಳಿಬರುತ್ತಿದೆ. ಸಿನಿಮಾ ರಂಗದ ಅನೇಕರು ಪೋಸ್ಟ್ ವಿರುದ್ಧ ಧ್ವನಿ ಎತ್ತಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಕೂಡ ಕಠಿಣ ಕ್ರಮದ ಮಾತುಗಳನ್ನು ಆಡಿದ್ದಾರೆ. ಈ ಬೆನ್ನಲ್ಲೇ ಪೋಸ್ಟ್ ವಿಚಾರವಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಮೊದಲ ಸಲ ಪ್ರತಿಕ್ರಿಯೆ ನೀಡಿದ್ದಾರೆ.
ಹೌದು, ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಅವಹೇಳನಕಾರಿ ಪೋಸ್ಟ್ ಬಗ್ಗೆ ಇದೀಗ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಪ್ರತಿಕ್ರಿಯಿಸಿದ್ದಾರೆ. “ಬೇರೆ ಆಯ್ಕೆ ಇಲ್ಲ. ಜೀವನ ಸಾಗಲೇಬೇಕು. ಎರಡನ್ನೂ ಸಮಾನವಾಗಿ ಸ್ವೀಕರಿಸುತ್ತೇನೆ” ಎಂದು ಹೇಳಿದ್ದಾರೆ.
ಏನಿದು ಪ್ರಕರಣ?:
ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್ ಸಿಬಿ ಅನ್ ಬಾಕ್ಸ್ ಇವೆಂಟ್ ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ಈ ಸಮಯದಲ್ಲಿ ನಟ ದರ್ಶನ್ ಅಭಿಮಾನಿಗಳ ಗಜಪಡೆ ಟ್ವಿಟರ್ ಪೇಜ್‌ನಿಂದ ಹಾಕಿದ್ದ ಪೋಸ್ಟ್‌ವೊಂದು ಕಳೆದೆರಡು ದಿನಗಳಿಂದ ಭಾರೀ ಚರ್ಚೆ ಹುಟ್ಟಾಕಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕುರಿತು ಮಾಡಲಾಗಿದ್ದ ಆ ಅವಹೇಳನಕಾರಿ ಪೋಸ್ಟ್ ಬಗ್ಗೆ ಈಗಾಗಲೇ ದೂರು ಕೂಡ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


