ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಚಾಲ್ತಿಯಲ್ಲಿರುವಂತೆಯೇ ಇತ್ತ ಕರ್ನಾಟಕ-ಆಂಧ್ರ ಗಡಿಯಲ್ಲಿ ಅಧಿಕಾರಿಗಳು ಕಾರಿನಲ್ಲಿ ಸಾಗುಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕರ್ನಾಟಕ-ಆಂಧ್ರ ಗಡಿಯ ನಂಗಲಿ ಚೆಕ್ ಪೋಸ್ಟ್ ನಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಆರೋಪಿಯಿಂದ 1200 ಜಿಲೆಟಿನ್ ಕಡ್ಡಿಗಳು, 7 ಬಾಕ್ಸ್ ವೈರ್, 6 ಡಿಟೋನೇಟರ್ ವಶಪಡಿಸಿಕೊಳ್ಳಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ನಂಗಲಿ ಚೆಕ್ ಪೋಸ್ಟ್ ಬಳಿ ಸ್ಫೋಟಕ ಸಾಗಿಸುತ್ತಿದ್ದ ದುಷ್ಕರ್ಮಿಯನ್ನು ಬಂಧಿಸಲಾಗಿದೆ. ಖಾಸಗಿ ಕಾರಿನಲ್ಲಿ ಸ್ಫೋಟಕಗಳನ್ನು ಸಾಗಿಸಲಾಗುತ್ತಿತ್ತು. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು, ಬಂಧಿತನನ್ನು ಆಸಿಫ್ ಹಜರತ್ ಅಲಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


