ಶಿರಾ: ತಾಲೂಕಿನ ಅಮರಾಪುರ ರಸ್ತೆಯ ಬಡಕನಹಳ್ಳಿ ಕ್ರಾಸ್ ಬಳಿ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಜಿಂಕೆಯೊಂದು ಸ್ಥಳದಲ್ಲೇ ಮೃತಪಟ್ಟಿದೆ. ಈ ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮಂಜುನಾಥ(35) ಗಾಯಗೊಂಡ ವ್ಯಕ್ತಿಯಾಗಿದ್ದಾರೆ.
ರಸ್ತೆಯಲ್ಲಿ ಹೋಗುವ ಮಾರ್ಗದಲ್ಲಿ ರಸ್ತೆ ದಾಟುತ್ತಿದ್ದ ಜಿಂಕೆಯು ವಾಹನಕ್ಕೆ ಅಡ್ಡ ಬಂದಿದ್ದು, ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಜಿಂಕೆಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಜಿಂಕೆ ಮೃತಪಟ್ಟಿದೆ.
ವಿಷಯ ತಿಳಿದ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ನವನೀತ, ಪಶು ಆಸ್ಪತ್ರೆಯ ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಘಟನೆಯು ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


