ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪಿಯು ಮಂಡಳಿಯ ಅಧಿಕೃತ ವೆಬ್ ಸೈಟ್ karresults.nic.in ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.
ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ನಂತರ ಸ್ಥಾನದಲ್ಲಿ ಕೆ ಹೆಚ್ ಉರ್ವೀಶ್ ಪ್ರಶಾಂತ್ 597 ಅಂಕ, ವೈಭವಿ ಆಚಾರ್ಯ 597 ಅಂಕ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಮೂವರು ಟಾಪರ್ಗಳಾಗಿದ್ದಾರೆ. ಕಲಾ ವಿಭಾಗದಲ್ಲಿ ಮೇಧಾ ಡಿ. ಟಾಪರ್ 600ಕ್ಕೆ 596 ಅಂಕಗಳನ್ನು ಪಡೆದರೆ, ವಿಜಯಪುರದ ವೇದಾಂತ್ ಜ್ಞಾನುಭ ನವಿ ಮತ್ತು ಕವಿತಾ ಬಿ ವಿ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600ಕ್ಕೆ 597 ಅಂಕ ಪಡೆದು ಟಾಪರ್ ಆಗಿದ್ದಾರೆ. ಪವನ್ ಎಂ ಎಸ್ ಮತ್ತು ಹರ್ಷಿತ ಎಸ್ ಎಚ್ 596 ಅಂಕ ಪಡೆದಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ 97.37 ಶೇಕಡ ದೊಂದಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. 96.80 ಶೇಕಡದೊಂದಿಗೆ ಉಡುಪಿ ದ್ವಿತೀಯ ಸ್ಥಾನದಲ್ಲಿದ್ದರೆ, ಗದಗ ಜಿಲ್ಲೆ 72.86 ಶೇಕಡ ದೊಂದಿಗೆ ಕೊನೆಯ ಸ್ಥಾನದಲ್ಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


