ಗದಗ: ನಡುರಸ್ತೆಯಲ್ಲಿ ಪತ್ನಿಯನ್ನು ಹರಿತವಾದ ಕಬ್ಬಿಣದ ಆಯುಧದಿಂದ ಪತಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿದಲ್ಲಿ ನಡೆದಿದೆ. ಮುಂಡರಗಿ ಪಟ್ಟಣದ ಪೋಸ್ಟ್ ಆಫೀಸಿನಲ್ಲಿ ಪೋಸ್ಟ್ ವುಮೇನ್ ಆಗಿ ಕೆಲಸ ಮಾಡುತ್ತಿದ್ದ ಗೀತಾ ಹಲ್ಲೆಗೆ ಒಳಗಾದ ಮಹಿಳೆಯಾಗಿದ್ದಾರೆ. ಆರೋಪಿ ಪತಿಯನ್ನು ಪೋಲಿಸರು ಬಂಧಿಸಿದ್ದಾರೆ.
ಹಲ್ಲೆಗೊಳಗಾದ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದಿದ್ದು ಸಾರ್ವಜನಿಕರು, ಪೊಲೀಸರು ಸೇರಿ ಪೊಲೀಸ್ ಜೀಪಿನಲ್ಲೇ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯನ್ನು ಪ್ರಾಥಮಿಕ ಚಿಕಿತ್ಸೆಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮಹಿಳೆ ಹಾಗೂ ಪತಿ ನಡುವಿನ ಕೌಟುಂಬಿಕ ಕಲಹವೇ ಹಲ್ಲೆಗೆ ಕಾರಣ ಎನ್ನಲಾಗಿದೆ. ಪ್ರಕರಣ ದಾಖಲಿಸಿದ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


