ಕೊರಟಗೆರೆ: 850 ವರ್ಷಗಳ ಇತಿಹಾಸವುಳ್ಳ ವಡ್ಡಗೆರೆ ವೀರನಾಗಮ್ಮ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರೆವೇರಿತು. ಪ್ರತಿ ವರ್ಷ ಯುಗಾದಿ ಹಬ್ಬ ಆದ ಮಾರನೇ ದಿನ ನಡೆಯುವ ವಿಶೇಷ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ಆಚರಿಸಲ್ಪಡುತ್ತಿದೆ.
ಈ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಲೋಕಸಭಾ ಅಭ್ಯರ್ಥಿ ವಿ. ಸೋಮಣ್ಣ ಶ್ರೀ ವೀರನಾಗಮ್ಮ ತಾಯಿಯ ಆಶೀರ್ವಾದ ಪಡೆದರು.
ಈ ಬಾರಿ ಉತ್ತಮ ಮಳೆಯಾಗಿ ದೇಶದ ಎಲ್ಲ ಜನರಿಗೆ ಸಮೃದ್ಧಿ ಸಿಗಲಿ ಎಂದು ಯುಗಾದಿ ಹಬ್ಬದ ಶುಭ ಹಾರೈಸಿದ ವಿ. ಸೋಮಣ್ಣ ಪ್ರಸಾದ ಬಡಿಸುವ ಸ್ಥಳಕ್ಕೆ ತೆರಲಿ, ಭಕ್ತಾದಿಗಳಿಗೆ ಪ್ರಸಾದ ಬಡಿಸಿದರು.
ಮುಂದಿನ ದಿನಗಳಲ್ಲಿ ದೇವಸ್ಥಾನ ಹಾಗೂ ಗ್ರಾಮಗಳಲ್ಲಿ ಅಭಿವೃದ್ಧಿಯ ಕೆಲಸಗಳನ್ನ ಮಾಡೋಣ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎಲ್ಲ ಮುಖಂಡರು ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು .
ವರದಿ: ಮಂಜುಸ್ವಾಮಿ ಎಂ. ಎನ್., ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


