ನವದೆಹಲಿ: ದೇಶದ ಪ್ರತಿಯೊಬ್ಬ ನಾಗರಿಕ ಮೂಲಭೂತ ಹಕ್ಕುಗಳನ್ನು ಪಡೆಯಲು ಅರ್ಹ ಎಂದು ಹೇಳಿರುವ ಸುಪ್ರೀಂಕೋರ್ಟ್, ಲೈಂಗಿಕ ಕಾರ್ಯಕರ್ತೆರಿಗೆ ಆಧಾರ್ ಕಾರ್ಡ್, ಪಡಿತರ ಮತ್ತು ಮತದಾರರ ಗುರುತಿನ ಚೀಟಿಯನ್ನು ನೀಡುವ ಪ್ರಕ್ರಿಯೆಯನ್ನು ಆದಷ್ಟು ಬೇಗ ನಡೆಸುವಂತೆ ಕೇಂದ್ರ, ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಕೋವಿಡ್-19 ಸಾಂಕ್ರಾಮಿಕದಿಂದ ಸಂಕಷ್ಟಕ್ಕೆ ಸಿಲುಕಿರುವ ಲೈಂಗಿಕ ಕಾರ್ಯಕರ್ತೆಯರ ಸಮಸ್ಯೆಗಳ ಕುರಿತಾದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್, ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ಪೀಠ, ವಿಚಾರಣೆ ನಡೆಸಿದ ಪೀಠವು, ಗುರುತಿನ ಪುರಾವೆ ಇಲ್ಲದಿದ್ದರೂ ಲೈಂಗಿಕ ಕಾರ್ಯಕರ್ತೆಯರಿಗೆ ಒಣ ಪಡಿತರವನ್ನು ನೀಡಬೇಕು ನಿರ್ದೇಶನ ನೀಡಿದೆ.
ಲೈಂಗಿಕ ಕಾರ್ಯಕರ್ತರಿಗೆ ಪಡಿತರ ಚೀಟಿ ಮತ್ತು ಮತದಾರರ ಗುರುತಿನ ಚೀಟಿ ನೀಡಲು ಈ ಹಿಂದೆಯೂ ನಿರ್ದೇಶನ ನೀಡಲಾಗಿತ್ತು. ಆದರೆ, ಈವರೆಗೂ ಆದೇಶ ಅನುಷ್ಠಾನಕ್ಕೆ ಬಂದಿಲ್ಲ. ಇದರ ಹಿಂದೆ ಯಾವುದೇ ಕಾರಣಗಳೂ ಇಲ್ಲ ದೇಶದ ಎಲ್ಲಾ ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಪೀಠ ಹೇಳಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700