ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿದ್ದ ಸಂಪಾಜೆಯ ಡಾ.ಟಿ. ಶ್ಯಾಮ್ ಭಟ್ ಅವರನ್ನು ಆಯೋಗದ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇವರು ಜಿಲ್ಲಾಧಿಕಾರಿ, ಸಾರಿಗೆ ಇಲಾಖೆ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು, ಕರ್ನಾಟಕ ಲೋಕಸೇವಾ ಆಯುಕ್ತರು ಮೊದಲಾದ ಉನ್ನತ ಹುದ್ದೆಗಳನ್ನು ಅಲಂಕರಿಸಿದ ಶ್ಯಾಮ್ ಭಟ್ಟರ ಕಲಾಪ್ರೀತಿ ಅನನ್ಯವಾದದ್ದು. ತನ್ನ ಕರ್ತವ್ಯದ ಒಂದು ಭಾಗವೆಂದೇ ಭಾವಿಸಿದ್ದಾರೆ. ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಮತ್ತು ಸಂಪಾಜೆ ಯಕ್ಷೋತ್ಸವದ ಮುಖಾಂತರ ಅವರು ನಡೆಸಿದ ಕಲಾಸೇವೆ ಅವಿಸ್ಮರಣೀಯ.
ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರ ಆಯ್ಕೆಯಾಗುವ ತನಕ ಡಾ.ಟಿ. ಶ್ಯಾಮ್ ಭಟ್ ಅವರು ಹಂಗಾಮಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


