ನವದೆಹಲಿ: ವೇಗವಾಗಿ ಬಂದ ಕಾರು, ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ದೆಹಲಿಯ ನೆರೆಯ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಬೈಕ್ ನಲ್ಲಿದ್ದ ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಮೃತ ದುರ್ದೈವಿಗಳನ್ನು,ಸುರೇಂದ್ರ ಸಹೋದರಿಯರಾದ ಶೈಲಿ ಮತ್ತು ಅಂಶುಎಂದು ಗುರುತಿಸಲಾಗಿದೆ.
ಸುರೇಂದ್ರ ಎಂಬಾತ ತನ್ನ ಸಹೋದರಿಯರೊಂದಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ತಡರಾತ್ರಿ ಮನೆಗೆ ಮರಳುತ್ತಿದ್ದಾಗ ಅಪಘಾತವಾಗಿದ್ದು, ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಗಾಯಾಳುಗಳ ಮೇಲೆ ಹರಿದು ಪರಾರಿಯಾಗಿದೆ.
ವ್ಯಕ್ತಿ ಮತ್ತು ಆತನ ಸಹೋದರಿಯರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬೈಕ್ ಗೆ ಡಿಕ್ಕಿ ಹೊಡೆದ ವಾಹನವನ್ನು ಪೊಲೀಸರು ಇನ್ನೂಪತ್ತೆ ಹಚ್ಚಿಲ್ಲ. ವಾಹನವನ್ನು ಪತ್ತೆಹಚ್ಚಲು ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ ಎಂದಿದ್ದಾರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296