ಮಾಲ್ಡೀವ್ಸ್ ಇದೀಗ ಭಾರತೀಯರನ್ನು ಸೆಳೆಯಲು ಭಾರತದಲ್ಲಿ ರೋಡ್ ಶೋ ನಡೆಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಲಕ್ಷದ್ವೀಪದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿತ್ತು ಮಾಲ್ಡೀವ್ಸ್.
ಮಾಲ್ಡೀವ್ಸ್ ನ ಸಚಿವರು “ಲಕ್ಷದ್ವೀಪವನ್ನು ಅಭಿವೃದ್ಧಿ ಮಾಡಿದಾಕ್ಷಣ ಅದು ಮಾಲ್ಡೀವ್ಸ್ ಆಗುವುದಿಲ್ಲ” ಎಂದು ಹೇಳಿಕೆ ನೀಡಿದ್ದರು. ಮಾಲ್ಡೀವ್ಸ್ ನ ಕೆಲವು ಸಚಿವರು ಭಾರತದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು.
ಇದಾದ ಬಳಿಕ ಭಾರತದ ಹಲವು ಮಂದಿ ಮಾಲ್ಡೀವ್ಸ್ ಗೆ ಹೋಗಬೇಕೆಂದುಕೊಂಡವರು ಕೂಡ ತಮ್ಮ ತೀರ್ಮಾನ ಬದಲಾಯಿಸಿ ಲಕ್ಷದ್ವೀಪಕ್ಕೆ ತೆರಳಿದ್ದರು. ಮಾಲ್ಡೀವ್ಸ್ ಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಭಾರತದವರೇ ಹೆಚ್ಚಿನವರಾಗಿದ್ದು, ಪ್ರವಾಸೋದ್ಯಮವನ್ನೇ ಮಾಲ್ಡೀವ್ಸ್ ನಂಬಿಕೊಂಡಿತ್ತು. ಹಾಗಾಗಿ ಪ್ರವಾಸಿಗರಿಲ್ಲದೆ ಹೊಡೆತ ಬಿದ್ದಿರುವ ಹಿನ್ನೆಲೆಯಲ್ಲಿ ಭಾರತೀಯರನ್ನು ಸೆಳೆಯಲು ಮುಂದಾಗಿದೆ.
ಮಾಲ್ಡೀವ್ಸ್ ಅಸೋಸಿಯೇಷನ್ ಆಫ್ ಟ್ರಾವೆಲ್ ಏಜೆಂಟ್ಸ್ ಆ್ಯಂಡ್ ಟೂರ್ ಆಪರೇಟರ್ಸ್, ಪ್ರಮುಖ ಪ್ರವಾಸೋದ್ಯಮ ಸಂಸ್ಥೆಯು ಈ ಘೋಷಣೆ ಮಾಡಿದೆ. ಆದರೆ ಯಾವ ಯಾವ ನಗರಗಳಲ್ಲಿ ಮತ್ತು ಯಾವಾಗ ರೋಡ್ ಶೋ ನಡೆಯಲಿದೆ ಎನ್ನುವ ಮಾಹಿತಿ ನೀಡಿಲ್ಲ.
ಭಾರತೀಯ ಪ್ರವಾಸಿಗರ ಕೊರತೆಯ ನಡುವೆ, ಎರಡು ದೇಶಗಳ ನಡುವಿನ ಪ್ರಯಾಣ ಮತ್ತು ಪ್ರವಾಸೋದ್ಯಮ ಸಹಕಾರವನ್ನು ಹೆಚ್ಚಿಸುವ ಕುರಿತು ಭಾರತದ ಹೈಕಮಿಷನ್ ಮುನು ಮಹಾವರ್ ಅವರೊಂದಿಗೆ ಮಾಟಾಟೊ ಚರ್ಚೆ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296