ನವದೆಹಲಿ: ಭಾರತೀಯ ಜನತಾ ಪಕ್ಷದ ಲೋಕಸಭಾ ಚುನಾವಣಾ ಪ್ರಣಾಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ವಾಗ್ದಾಳಿ ನಡೆಸಿದ್ದು, ಕಳೆದ 10 ವರ್ಷಗಳಲ್ಲಿ ಪ್ರಧಾನಿ ಬಡವರಿಗಾಗಿ ಏನನ್ನೂ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿದ್ದರು. ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವುದಾಗಿ ಮತ್ತು ಕಾನೂನುಬದ್ಧ ಗ್ಯಾರಂಟಿ ನೀಡುವುದಾಗಿ ಹೇಳಿದ್ದರು. ಇವೆಲ್ಲವನ್ನೂ ಈಡೇರಿಸುವಂತೆ ದೇಶಾದ್ಯಂತ ರೈತರು ಒತ್ತಾಯಿಸುತ್ತಿದ್ದಾರೆ. ಈ ವರ್ಷಾರಂಭದಲ್ಲಿ ರೈತರು ಕೇಂದ್ರ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆಯನ್ನೂ ನಡೆಸಲಾಗಿತ್ತು.
ಯುವಕರು ಉದ್ಯೋಗವನ್ನು ಹುಡುಕುತ್ತಿದ್ದಾರೆ. ಹಣದುಬ್ಬರ ಹೆಚ್ಚುತ್ತಿದೆ. ಆದರೆ, ಮೋದಿ ಈ ಸಮಸ್ಯೆಗಳ ಬಗ್ಗೆ ಚಿಂತಿಸುತ್ತಿಲ್ಲ. ಅವರು ತಮ್ಮ ಅಧಿಕಾರಾವಧಿಯಲ್ಲಿ ದೇಶದ ಎಲ್ಲ ಜನರಿಗೆ ಅನುಕೂಲವಾಗುವಂತಹ ಯಾವುದೇ ಕೆಲಸವನ್ನು ಮಾಡಲಿಲ್ಲ ಎಂದು ಖರ್ಗೆ ವಾಗ್ದಾಳಿ ನಡೆಸಿದರು. ಬಿಜೆಪಿ ಪ್ರಣಾಳಿಕೆಯನ್ನು ನಂಬಬಾರದು ಎಂದು ಕಾಂಗ್ರೆಸ್ ನಾಯಕ ಖರ್ಗೆ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


