ಪಾವಗಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತುಮಕೂರು ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಪಾವಗಡ ವತಿಯಿಂದ ಇಂದು ರೈತರ ಎತ್ತಿನ ಗಾಡಿ ಮತ್ತು ಟ್ರಾಕ್ಟರ್ ರ್ಯಾಲಿ ಗೆ ತಹಶೀಲ್ದಾರ್ ಸಂತೋಷ್ ಕುಮಾರ್ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಾನಕೀರಾಮ್ ರವರು ಚಾಲನೆ ನೀಡಿದರು.
ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಮಾಡುವ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಜಾಥಾದಲ್ಲಿ ಘೋಷವಾಕ್ಯಗಳನ್ನು ಕೂಗುತ್ತಾ ಬ್ಯಾನರ್, ಪ್ಲೇ ಕಾರ್ಡ್ಸ್ ಹಿಡಿದು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಜಾಥಾವು ಸಂಚರಿಸಿತು. ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಭಾಗವಹಿಸಿದ್ದರು.ನಂತರ ಮತದಾನ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA