ಟ್ರಕ್ಗೆ ಕಾರೊಂದು ಡಿಕ್ಕಿ ಹೊಡೆದ ತೀವ್ರತೆಗೆ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದ 7 ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ.
ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಉತ್ತರ ಪ್ರದೇಶದ ಮೀರತ್ ನಿವಾಸಿಗಳಾಗಿದ್ದಾರೆ. ರಾಜಸ್ಥಾನದ ಸಲಾಸರ್‌ನಲ್ಲಿರುವ ಸಲಾಸರ್ ಬಾಲಾಜಿ ದೇವಸ್ಥಾನಕ್ಕೆ ಹೋಗಿ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಮೃತರನ್ನು ನೀಲಂ ಗೋಯಲ್ (55), ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಹಾರ್ದಿಕ್ ಬಿಂದಾಲ್ (37), ಸ್ವಾತಿ ಬಿಂದಾಲ್ (32) ಮತ್ತು ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದರು ಆದರೆ ಬೆಂಕಿಯನ್ನು ನಿಯಂತ್ರಣಕ್ಕೆ ತರುವಷ್ಟರಲ್ಲಿ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA