nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದ 28 ಕ್ಷೇತ್ರದಲ್ಲೂ ಪ್ರಚಾರ ಮಾಡ್ತೀನಿ: ವಿ.ಸೋಮಣ್ಣ ಗೆದ್ದರೇ ದೇವೇಗೌಡರೇ ಗೆದ್ದಂತೆ: ಹೆಚ್.ಡಿ.ದೇವೇಗೌಡ
    ಕೊರಟಗೆರೆ April 15, 2024

    ರಾಜ್ಯದ 28 ಕ್ಷೇತ್ರದಲ್ಲೂ ಪ್ರಚಾರ ಮಾಡ್ತೀನಿ: ವಿ.ಸೋಮಣ್ಣ ಗೆದ್ದರೇ ದೇವೇಗೌಡರೇ ಗೆದ್ದಂತೆ: ಹೆಚ್.ಡಿ.ದೇವೇಗೌಡ

    By adminApril 15, 2024No Comments3 Mins Read
    v somanna

    ಕೊರಟಗೆರೆ : ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲೂ ನಮ್ಮ ಮೈತ್ರಿ ಅಭ್ಯರ್ಥಿಗಳೇ ಗೆಲ್ತಾರೇ. ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಗೆಲ್ಲಿಸಿ ಪಾರ್ಲಿಮೆಂಟ್ ಕಳಿಸಿಕೊಡುವ ಶಕ್ತಿ ಇನ್ನೂ ಇದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಆಗುವ ಅರ್ಹತೆ ಯಾರಿಗೇ ಇದೇ ಹೇಳಿ. ತುಮಕೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಗೆದ್ದರೇ ನಿಮ್ಮ ದೇವೇಗೌಡರೇ ಗೆದ್ದಂತೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು.

    ಕೊರಟಗೆರೆ ಪಟ್ಟಣದ ಊರ್ಡಿಗೆರೆ ಸಮೀಪದ ಖಾಸಗಿ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾಪಾರ್ಟಿ ಮತ್ತು ಜಾತ್ಯಾತೀತ ಜನತಾದಳ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ನಾನು ಕಾವೇರಿ ವಿಚಾರದಲ್ಲಿ ಮೋದಿಯನ್ನು ನಂಬಿದ್ದೇನೆ. 1962ರಿಂದ ನಾನು ಕಾವೇರಿ ನೀರಿಗಾಗಿ ಹೋರಾಟ ಮಾಡಿದ್ದೇನೆ. ವಿ.ಸೋಮಣ್ಣ ಗೆದ್ರೇ ತಲೆ ಎತ್ತಿ ನಾನು ಮೋದಿಗೆ ಕಾವೇರಿ ನೀರು ಮತ್ತು ಮೇಕೆದಾಟಿನ ಬಗ್ಗೆ ಪ್ರಶ್ನೆ ಮಾಡ್ತಿನಿ. ತಮಿಳುನಾಡಿನ ಸ್ಟಾಲಿನ್ ನೀರಿನ ವೈರತ್ವದ ಬಗ್ಗೆ ಪ್ರಧಾನಿ ಮೋದಿಗೂ ಅರ್ಥ ಆಗಿದೆ. ನಾನು 2019ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ ಆದರೇ ಈಬಾರಿ ವಿ.ಸೋಮಣ್ಣ ಗೆದ್ದು ದೆಹಲಿಗೆ ಹೋಗಬೇಕಿದೆ ಎಂದು ಮನವಿ ಮಾಡಿದರು.

    ಸಿದ್ದರಾಮಯ್ಯನವರೇ ನೀವು ರಾಜ್ಯದ 7ಕೋಟಿ ಜನರ ಮುಖ್ಯಮಂತ್ರಿ. 150ಕೋಟಿ ಜನರ ಪ್ರಧಾನಮಂತ್ರಿ ನರೇಂದ್ರಮೋದಿ ಬಗ್ಗೆ ಮಾತನಾಡುವ ಮುನ್ನ ಎಚ್ಚರವಹಿಸಿ. ಸೋಮಣ್ಣ ಎಲ್ಲಿಯವನು ಅಂತಾ ನೀವು ಕೇಳ್ತಿರಾ. ನೀವು ಎಲ್ಲಿಯವರು ಬಾದಾಮಿಗೆ ಯಾಕೆ ಹೋದ್ರಿ ಹೇಳಿ. ಹೆಗಡೆ ಸಿಎಂ ಆಗಿದ್ದಾಗ ಬರಗಾಲ ಇತ್ತು ಆಗ ಅವರ ಕೇಂದ್ರ ಎಷ್ಟು ಹಣ ಕೊಡ್ತು ಅಂತಾ ಸಿದ್ದರಾಮಯ್ಯ ಹೇಳಲಿ. ನಾನು ತುಮಕೂರಿಗೆ ನೀರು ಕೋಡೋದಿಲ್ಲ ಅಂತೇಳಿ ನನ್ನ ಸೋಲಿಸಿದ್ರು. ಈಗ ಬೆಂಗಳೂರಿನಲ್ಲಿ ಕುಡಿಯೋ ನೀರಿನ ದಂದೇ ಎಷ್ಟು ನಡೆಯುತ್ತಿದೆ ಎಂಬುದು ಮೋದಿಯ ಗಮನಕ್ಕೆ ಹೋಗಿದೆ ಎಂದರು.

    ತುಮಕೂರು ಲೋಕಸಭಾ ಅಭ್ಯರ್ಥಿ ವಿ.ಸೋಮಣ್ಣ ಮಾತನಾಡಿ ಸಿದ್ದರಾಮಯ್ಯ ಸಿಎಂ ಮಾಡೊಕೆ 86ಶಾಸಕರ ಸಹಿ ಹಾಕಿಸಿ ದೇವೇಗೌಡರಿಗೆ ಕೊಟ್ಟಿದ್ದು ಇದೇ ಸೋಮಣ್ಣ. ಒಂದೇ ಬೂತ್ನಲ್ಲಿ 2ಸಾವಿರ ಮತಗಳ ಲೀಡ್ ಕೊಡಿಸಿದ್ದು ಇದೇ ಸೋಮಣ್ಣ. ನೀವು ಮಾತನಾಡುವಾಗ ಅವರ ಅರ್ಹತೆ ಬಗ್ಗೆ ತಿಳಿಯಬೇಕಿದೆ. ನಿಮಗೇ ಅವಕಾಶ ಸಿಗ್ತು ನೀವು ಮುಖ್ಯಮಂತ್ರಿ ಆಗಿದ್ದೀರಿ. ಅರ್ಹತೆ ಇದ್ದೋರಿಗೆ ಸರಿಯಾದ ಅವಕಾಶ ಸಿಗೋದಿಲ್ಲ. ನೀವು ಎಲ್ಲೋ ಕೊತಿದ್ದೀರಿ ಅಂತಾ ಇನ್ನೋಬ್ಬರನ್ನು ಟೀಕೆ ಮಾಡ್ಬೇಡಿ ಎಂದು ಕಿಡಿಕಾರಿದರು.

    ನಾವು ಬಡವರ ಮಕ್ಕಳು ನಿಮ್ಮ ಹಾಗೇ ಶ್ರೀಮಂತರ ಮಕ್ಕಳಲ್ಲ. ನಾವು ಇನ್ನೋಬ್ಬರ ಬಗ್ಗೆ ರಾಜಕೀಯ ಪ್ರೇರಿತವಾಗಿ ಮಾತನಾಡಲ್ಲ. ಸೋಮಣ್ಣ ಹಿಂದೆ ಇಡೀ ಭಾರತ ದೇಶ ಇದೆ. ನರೇಂದ್ರ ಮೋದಿ, ಅಮಿತ್ಶಾ ಅಂತಹ ನಾಯಕರು ಇದಾರೇ. ನನಗೇ ಸಂಸ್ಕಾರ ಹೇಳಿಕೊಟ್ಟ ದೇವೇಗೌಡರು ಜೊತೆಗಿದ್ದಾರೆ. ನಾನು ಯಾರ ಬಗ್ಗೆ ಟೀಕೆ ಮಾಡೋದಿಲ್ಲ ಎಂದು ಪರೋಕ್ಷವಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ಗೆ ಟಾಂಗ್ ನೀಡಿದರು.

    ಕಾರ್ಯಕ್ರಮದಲ್ಲಿ ಮಾಜಿ ಸಚಿವ ಗೋಪಾಲಯ್ಯ,ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್,ಬಿಜೆಪಿ ಮುಖಂಡ ಅನಿಲ್ಕುಮಾರ್, ಎಂಎಲ್ಸಿ ನಾರಾಯಣಸ್ವಾಮಿ, ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜಿನಪ್ಪ, ಬಿಜೆಪಿ ಯುವಧ್ಯಕ್ಷ ಶಿವಕುಮಾರ್, ಮಾಜಿ ಅಧ್ಯಕ್ಷ ಪವನಕುಮಾರ್, ಗುರುಧತ್, ದಾಸಲುಕುಂಟೆ ರಘು ಸೇರಿದಂತೆ ಇತರರು ಇದ್ದರು.

    ಮೂರು ಗಂಟೆ ತಡವಾಗಿ ಸಮಾವೇಶ ಆರಂಭ:

    ಮೈತ್ರಿಪಕ್ಷದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸೋಮವಾರ ಬೆಳಗ್ಗೆ10ಗಂಟೆಗೆ ಬರಬೇಕಿತ್ತು. ಆದರೇ ಕೆಲವು ಕಾರಣದಿಂದ 3ಗಂಟೆ ತಡವಾಗಿ ಮಧ್ಯಾಹ್ನ 1ಗಂಟೆಗೆ ಆಗಮಿಸಿದ ಪರಿಣಾಮ ಸಮಾವೇಶ ತಡವಾಗಿ ಆರಂಭವಾಯಿತು. ಹಳ್ಳಿಗಳಿಂದ ಆಗಮಿಸಿದ್ದ ನೂರಾರು ಜನ ಮುಖಂಡರು ಮತ್ತು ಕಾರ್ಯಕರ್ತರು ಬಿಸಿಲಿನ ತಾಪಕ್ಕೆ ಕಾದು ಕಾದು ಬೇಜಾರಿನಿಂದ ಹಿಂದಿರುಗಿದ ಘಟನೆ ನಡೆಯಿತು.

    ಹಾಲಿ ಸಂಸದ ಬಸವರಾಜು ಗೈರು:

    ಮೈತ್ರಿಪಕ್ಷದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಾವೇಶದಲ್ಲೂ ಗೈರಾಗಿದ್ದ ತುಮಕೂರು ಹಾಲಿ ಸಂಸದ ಜಿ.ಎಸ್.ಬಸವರಾಜು ಕೊರಟಗೆರೆಯಲ್ಲಿ ಸೋಮವಾರ ನಡೆದ ಮಾಜಿ ಪ್ರಧಾನಿಗಳ ಸಮಾವೇಶದಲ್ಲೂ ಮತ್ತೆ ಗೈರಾಗಿದ್ದಾರೆ. ಕೊರಟಗೆರೆಯಲ್ಲಿ ನಡೆದ ವಿ.ಸೋಮಣ್ಣನವರ ಸುದ್ದಿಗೋಷ್ಟಿ ಸೇರಿದಂತೆ ಕೊರಟಗೆರೆ ಕ್ಷೇತ್ರದ ಬೂತ್ ಮಟ್ಟದ ಸಭೆ ಮತ್ತು ಗ್ರಾ.ಪಂ. ಮಟ್ಟದ ಯಾವುದೇ ಸಮಾರಂಭದಲ್ಲಿ ಭಾಗವಹಿಸದೇ ಇರುವುದು ಹಲವು ಅನುಮಾನಕ್ಕೆ ಕಾರಣವಾಗಿ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ.

    ವರದಿ : ಮಂಜುಸ್ವಾಮಿ ಎಂ ಎನ್ ಕೊರಟಗೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ…

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.