ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನರು ಅಸ್ವಸ್ಥರಾದ ಘಟನೆ ನಡೆದಿದೆ.
ನಿನ್ನೆ(ಏ.17) ರಾಮ ನವಮಿಯಂದು ಸುಬ್ರಹ್ಮಣ್ಯ ದೇಗುಲದಲ್ಲಿ ಮಜ್ಜಿಗೆ, ಪಾನಕವನ್ನ ಗ್ರಾಮಸ್ಥರು ಸೇವಿಸಿದ್ದರು. ಬಳಿಕ ಮಧ್ಯರಾತ್ರಿಯಿಂದ ವಾಂತಿ-ಭೇದಿ ಶುರುವಾಗಿದ್ದು, ಬೆಳಗ್ಗೆ ಎಡೆಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು.
ಆದರೆ, ಆರೋಗ್ಯ ಸುಧಾರಿಸದ ಹಿನ್ನೆಲೆ ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


