ಬೆಂಗಳೂರು: 9 ವರ್ಷದ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ, ಅವರ ಪೋಷಕರಿಂದ ತಮ್ಮ ಹೆಸರಲ್ಲಿ ಆಸ್ತಿ ಬರೆಸಿಕೊಂಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಹೊರಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ವಿರುದ್ಧ ಸಂಸದ ಡಿ.ಕೆ. ಸುರೇಶ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ಡಿ.ಕೆ. ಸುರೇಶ್, ಅಪಹರಿಸಿ ಆಸ್ತಿ ಬರೆಸುವ ಪರಿಸ್ಥಿತಿ ನಮಗೆ ಬಂದಿಲ್ಲ. ಕ್ಷುಲ್ಲಕ ರಾಜಕಾರಣದಲ್ಲಿ ದೇವೇಗೌಡರು ಹೆಸರುವಾಸಿ. ಅವರು ಹಿರಿಯರು, ಹಾಗಾಗಿ ಹೆಚ್ಚು ಮಾತನಾಡಲ್ಲ. ಅವರ ಆರೋಪಕ್ಕೆ ಮುಂದಿನ ದಿನಗಳಲ್ಲಿ ಉತ್ತರಿಸುತ್ತೇವೆ ಎಂದು ಹೇಳಿದ್ದಾರೆ.
ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸುತ್ತಾ ಹಳೆ ವಿಚಾರವೊಂದನ್ನು ಬಯಲಿಗೆ ತಂದ ಹೆಚ್ ಡಿಡಿ, ಅಮೆರಿಕದಲ್ಲಿ ಹಣ ಸಂಪಾದನೆ ಮಾಡಿ ಸ್ವದೇಶಕ್ಕೆ ವಾಪಸಾದ ವ್ಯಕ್ತಿಯೊಬ್ಬರ ಜಮೀನನ್ನು ಕಬಳಿಸಲು ಡಿ.ಕೆ. ಶಿವಕುಮಾರ್ ಅವರ 9 ವರ್ಷದ ಮಗಳನ್ನು ಅಪಹರಿಸಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


