ಬೇತುಲ್: ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯದ ನಂತರ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿದ್ದು, 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡ ಘಟನೆ ನಡೆದಿದೆ.
ಐವರು ಪೊಲೀಸರು ಮತ್ತು ಉಳಿದ ಗೃಹರಕ್ಷಕರು ಸೇರಿದಂತೆ ಒಟ್ಟು 40 ಸಿಬ್ಬಂದಿ ಹೊತ್ತ ಬಸ್ ಛಿಂದ್ವಾರಾದಲ್ಲಿ ಚುನಾವಣಾ ಕರ್ತವ್ಯದ ನಂತರ ರಾಜ್ ಗಢಕ್ಕೆ ತೆರಳುತ್ತಿದ್ದಾಗ ಭೋಪಾಲ್-ಬೇತುಲ್ ಹೆದ್ದಾರಿಯ ಬರೇತಾ ಘಾಟ್ ಬಳಿ ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡಿರುವ ಎಂಟು ಸಿಬ್ಬಂದಿಗೆ ಬೆತುಲ್ ನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಣ್ಣಪುಟ್ಟ ಗಾಯಗೊಂಡವರಿಗೆ ಶಾಹಪುರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


