ಬೆಂಗಳೂರು: ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಧರ್ಮ, ಭಾಷೆ ಜಾತಿ, ಸೌಹಾರ್ದ್ಯತೆ ವಿಚಾರದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಾದ ಹಿನ್ನೆಲೆ ಬಿ.ವೈ. ವಿಜಯೇಂದ್ರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಶಿಕಾರಿಪುರ ವಿಧಾನಸಭಾಕ್ಷೇತ್ರದ ಶಾಸಕರು ಆಗಿರುವ ವಿಜಯೇಂದ್ರ ಹಾಗೂ ಬಿಜೆಪಿ ಎಕ್ಸ್ ಖಾತೆ ಉಸ್ತುವಾರಿ ವಹಿಸಿಕೊಂಡಿರುವವರ ವಿರುದ್ಧ ಗಾಂಧಿನಗರದ ಚುನಾವಣಾ ನೊಡೆಲ್ ಅಧಿಕಾರಿ ಅರ್ಜುನ್ ಆಯೂರ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


