ಬೀದರ್: ಬೀದರ್ ಜಿಲ್ಲೆಯಲ್ಲೂ ಶುಕ್ರವಾರ ಭರ್ಜರಿ ಮಳೆಯಾಗಿದ್ದು, ತಾಲೂಕಿನ ಬರೂರು ಗ್ರಾಮದಲ್ಲಿ ಜಮೀನಿಗೆ ತೆರಳಿದ್ದ ಓರ್ವ ಮಹಿಳೆ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ನಡೆದಿದೆ. ಪುಷ್ಪಲತಾ(50) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಗುಡುಗು, ಮಿಂಚು ಸಮೇತ ಭಾರೀ ಮಳೆಯಾಗಿದ್ದು, ಕೆಲಸಕ್ಕೆಂದು ಜಮೀನಿಗೆ ಹೋಗಿದ್ದ ಮಹಿಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಮಹಿಳೆಯ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


