ಹುಬ್ಬಳ್ಳಿ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ಕುರಿತು ನಟಿ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಗಾರನಿಗೆ ತಕ್ಕ ಶಿಕ್ಷೆ ಆಗಬೇಕು ಆದರೆ, ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದಿದ್ದಾರೆ.
ಪ್ರಕರಣ ಕುರಿತು ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಾಕಿರುವ ರಚಿತಾ ರಾಮ್, ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದಿದ್ದಾರೆ. ಜಾತಿ, ಧರ್ಮ ಯಾವುದೇ ಆಗಿರಲಿ. ಮೊದಲು ನಾವು ಮಾನವರು. ನಾನು ಈ ಪೋಸ್ಟ್ ಹಾಕಲು ಕಾರಣ ಆಕೆಗೆ (ನೇಹಾ) ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ ಎಂದು ನಟಿ ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರಕ್ಕೆ ನನ್ನ ಒಂದು ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ. ಅಲ್ಲದೇ #wewantjustice ಎಂದು ಟ್ಯಾಗ್ ಹಾಕಿ ನೇಹಾಗೆ ರಚಿತಾ ರಾಮ್ ಪೋಸ್ಟ್ ಹಂಚಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296