ತುಮಕೂರು: ತಮಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ ಸೋಮಣ್ಣ ಅವರ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಚಿವ ಮಾಧುಸ್ವಾಮಿಯವರು ಈ ಹಿಂದೆ ಪ್ರತಿನಿಧಿಸುತ್ತಿದ್ದ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಸ್ಥಳೀಯ ಕೆಲ ಬಿಜೆಪಿ ಮುಖಂಡರು ಹಾಗೂ ಜೆಡಿಎಸ್ ನ ಶಾಸಕ ಸುರೇಶ್ ಬಾಬು ಅವರೊಂದಿಗೆ ಭರ್ಜರಿ ಪ್ರಚಾರ ನಡೆಸಿದರು.
ಆದರೆ ಈ ಬಹಿರಂಗ ಪ್ರಚಾರದಲ್ಲಿ ಇನ್ನೂ ಕೂಡ ಬಿಜೆಪಿ ಅಭ್ಯರ್ಥಿಯ ಪರ ಕೆಲಸ ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಮಾಧುಸ್ವಾಮಿ ನೀಡಿದ್ದಾರೆ.
ಎನ್ ಡಿಎ ಮೈತ್ರಿ ಕೂಟದ ಅಭ್ಯರ್ಥಿ ವಿ. ಸೋಮಣ್ಣನವರು ಇಂದು ಹುಳಿಯಾರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮುಖ್ಯಪ್ರಾಣ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ಹುಳಿಯಾರು ಪಟ್ಟಣದಲ್ಲಿನ ತಮ್ಮ ಚುನಾವಣಾ ಪ್ರಚಾರ ಪ್ರಾರಂಭಿಸಿದರು.
ಜೆಡಿಎಸ್ ಶಾಸಕ ಸಿ.ಬಿ.ಸುರೇಶ್ ಬಾಬು, ಬಿಜೆಪಿಯ ಎಂ.ಡಿ.ಲಕ್ಷ್ಮೀನಾರಾಯಣ್, ರಾಮಚಂದ್ರಯ್ಯ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರುಗಳು ಪಾಲ್ಗೊಂಡಿದ್ದರು.
ಸ್ಥಳೀಯ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರೊಂದಿಗೆ ಶಾಸಕ ಸುರೇಶ್ ಬಾಬು ಸೋಮಣ್ಣ ಪರವಾಗಿ ಮತಯಾಚನೆಯಲ್ಲಿ ತೊಡಗಿರುವುದು ಒಂದು ರೀತಿ ಮಾಧುಸ್ವಾಮಿಯವರಿಗೆ ತೀವ್ರ ಇರಿಸು ಮುರಿಸು ಉಂಟಾಗಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಮಾಧುಸ್ವಾಮಿ ಅವರ ತಟಸ್ಥ ನಿಲುವು ಇಂದು ನಡೆದ ಪ್ರಚಾರ ಸಭೆಯಲ್ಲಿ ಸ್ಪಷ್ಟವಾಯಿತು ಎಂದೇ ಹೇಳಬಹುದಾಗಿದೆ.
ಈ ಮೂಲಕ ಮಾಧುಸ್ವಾಮಿ ಅವರ ಬೆಂಬಲಿತ ಮತದಾರರು ಯಾವ ನಿಲುವು ತೆಗೆದುಕೊಳ್ಳಲಿದ್ದಾರೆ ಎಂಬುದು ಒಂದು ರೀತಿ ನಿಗೂಢವಾಗಿದೆ ಎಂದೇ ಹೇಳಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296