ಬೆಂಗಳೂರು: ಬೆಂಗಳೂರು- ತುಮಕೂರು ಹೈವೆಯ ಮಾದಾವರ ಟೋಲ್ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಓಮ್ನಿ ಕಾರಿಗೆ ಬಲೆನೋ ಕಾರು ಹಿಂಬದಿಯಿಂದ ಡಿಕ್ಕಿಯೊಡೆದ ಪರಿಣಾಮ ಓಮ್ನಿಕಾರು ಪಲ್ಟಿಯಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಕಾರಿನಲ್ಲಿ ಒಟ್ಟು 8 ಜನ ಪ್ರಯಾಣ ಮಾಡ್ತಿದ್ರು. ಏಳು ಜನಕ್ಕೆ ಸುಟ್ಟ ಗಾಯಗಳಾಗಿದ್ರೇ 15 ವರ್ಷದ ಹುಡುಗಿಯೊಬ್ಬಳು ಸಜೀವ ದಹನವಾಗಿದ್ದಾಳೆ.
ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡ್ತಿದ್ದ 8 ಜನರಲ್ಲಿ ದಿವ್ಯಾ ಸಾವನ್ನಪ್ಪಿದ್ರೆ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್ ಹಾಗೂ ಶಾಂತಿಲಾಲ್ ಗಾಯಾಳುಗಳಾಗಿದ್ದಾರೆ. ಇವರಲ್ಲಿ ನಮನ್, ಸುನಿತಾ, ಮಾಯಾಂಕ್ ಸ್ಥಿತಿ ಗಂಭೀರವಾಗಿದೆ. ಮಾದಾವರದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳುಗಳೆಲ್ಲರೂ ಗುಜರಾತಿ ಮೂಲದ ಕುಟುಂಬದವರು.
ಬೆಂಗಳೂರು ಗ್ರಾಮಾಂತರ ಎಸ್. ಪಿ ಮಲ್ಲಿಕಾರ್ಜುನ್ ಬಾಲಾದಂಡಿ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ ನಂತರ ಘಟನೆಯ ಬಗ್ಗೆ, ತುಮಕೂರು ರಸ್ತೆ ಹೈವೇಯಲ್ಲಿ 10ಗಂಟೆ ರಾತ್ರಿಯಲ್ಲಿ ಘಟನೆ ನಡೆದಿದ್ದು, ಬಲೆನೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಮುಂದಿದ್ದ ಕಾರು ಎರಡು ಮೂರು ಪಲ್ಟಿ ಆಗಿದ್ದು ನಂತರ ಬೆಂಕಿ ಹತ್ತಿಕೊಂಡಿದೆ ಎಂದು ಮಾಹಿತಿ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


