nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ: ವಿದ್ಯಾರ್ಥಿ ಪ್ರಣಾಳಿಕೆ ಬಿಡುಗಡೆ!
    ತುಮಕೂರು April 22, 2024

    ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ: ವಿದ್ಯಾರ್ಥಿ ಪ್ರಣಾಳಿಕೆ ಬಿಡುಗಡೆ!

    By adminApril 22, 2024No Comments2 Mins Read
    aisdo

    ತುಮಕೂರು: ಇಂದು ಎಐಡಿಎಸ್‌ ಓ ತುಮಕೂರು ಜಿಲ್ಲಾ ಸಮಿತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು SUCI ಕಮ್ಯುನಿಸ್ಟ್ ಪಕ್ಷದ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಸ್.ಎನ್. ಸ್ವಾಮಿ ರವರಿಗೆ ಬಿಡುಗಡೆ ಮಾಡಿರುವ ವಿದ್ಯಾರ್ಥಿ ಪ್ರಣಾಳಿಕೆ ನೀಡಲಾಯಿತು.

    ಅಪ್ರಜಾತಾಂತ್ರಿಕವಾಗಿ ಹೇರಿರುವ ಎನ್.ಇ.ಪಿಯನ್ನು ಹಿಂಪಡೆಯಬೇಕು, ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು, ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯಬೇಕು, ಸರ್ಕಾರಿ‌ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು ಹಾಗೂ ಇನ್ನಿತರ ಆಗ್ರಹಗಳನ್ನೊಳಗೊಂಡ ವಿದ್ಯಾರ್ಥಿ ಪ್ರಣಾಳಿಕೆಯ ಬಗ್ಗೆ ಚರ್ಚಿಸಲು ಮನವಿ ಮಾಡಲಾಯಿತು.


    Provided by
    Provided by

    ಪ್ರಣಾಳಿಕೆ ನೀಡಿ ಮಾತನಾಡಿದ ಎಐಡಿಎಸ್‌ ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ, ಎಲ್ಲಾ ಸರ್ಕಾರಗಳು ದೇಶದ ನೈಜ ಸಮಸ್ಯೆಗಳನ್ನು ಮರೆಮಾಚುತ್ತಿವೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ-ಧರ್ಮದ ವಿಷಯಗಳನ್ನು ಮುನ್ನಲೆಗೆ ತರಲು ಯತ್ನಿಸುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರಜ್ಞಾವಂತಿಕೆ ಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಂಸತ್ ನಲ್ಲಿ  ಚರ್ಚೆಮಾಡುವ ರೀತಿ ಧ್ವನಿಯೆತ್ತಬೇಕಿದೆ ಎಂದರು.

    ದೇಶದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್ ಹಾಗೂ ನೇತಾಜಿಯವರ ಉತ್ತರಾಧಿಕಾರಿಗಳಾಗಿ ಅನ್ಯಾಯ ಮತ್ತು ಅಸತ್ಯದ ವಿರುದ್ಧ ಹೋರಾಡುವ ಉದಾತ್ತ ರಾಜಕೀಯವನ್ನು ನಡೆಸಬೇಕಿದೆ. ಪ್ರತಿಯೊಬ್ಬರಿಗೂ ಪ್ರಜಾತಾಂತ್ರಿಕ, ವೈಜ್ಞಾನಿಕ ಧರ್ಮನಿರಪೇಕ್ಷ ಶಿಕ್ಷಣವು ಖಾತ್ರಿಪಡಿಸುವಂತೆ ನಮ್ಮನ್ನಾಳುವ ಸರ್ಕಾರಗಳನ್ನು ಒತ್ತಾಯಿಸಬೇಕಿದೆ. ಈ‌ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಒಕ್ಕೊರಲಿನಿಂದ ಮುನ್ನುಗ್ಗಬೇಕಿದೆ ಎಂದು ಕರೆ ನೀಡಿದರು.

    ಈ ಕೆಳಗಿನ ಆಗ್ರಹಗಳು ಚುನಾವಣೆಯಲ್ಲಿ ಚರ್ಚೆ ಆಗಬೇಕೆಂದು ಆಗ್ರಹಿಸಿದರು.

    ಆಗ್ರಹಗಳು:

    1. ರಾಜ್ಯದಲ್ಲಿ ಅಪ್ರಜಾತಾಂತ್ರಿಕವಾಗಿ ಹೇರಿರುವ NEP– 2020 ಅನ್ನು ಹಿಂಪಡೆಯಿರಿ. ಜನಪರ ಶಿಕ್ಷಣ ನೀತಿಯನ್ನು ರೂಪಿಸಿ.

    2. ಶಿಕ್ಷಣಕ್ಕಾಗಿ ಕೇಂದ್ರ ಬಜೆಟ್‌ನಿಂದ 10% ಮತ್ತು ರಾಜ್ಯ ಬಜೆಟ್‌ನಿಂದ 30% ರಷ್ಟು ಮೀಸಲಿಡಿ – ಸರ್ವರಿಗೂ ವೈಜ್ಞಾನಿಕ, ಧರ್ಮನಿರಪೇಕ್ಷ, ಪ್ರಜಾಸತ್ತಾತ್ಮಕ ಮತ್ತು ಉಚಿತ ಶಿಕ್ಷಣವನ್ನು ಖಾತ್ರಿಪಡಿಸಿ.

    3. ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ನಿಲ್ಲಿಸಿ.

    4. ಎಲ್ಲಾ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಸುಧಾರಿಸಲು ಹಣವನ್ನು ಬಿಡುಗಡೆ ಮಾಡಿ ಮತ್ತು ಹೆಚ್ಚಿನ ಸರ್ಕಾರಿ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಿ.

    5. ಅಗತ್ಯವಿರುವ ಸಂಖ್ಯೆಯಲ್ಲಿ ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಹಾಸ್ಟೆಲ್ ಸೌಲಭ್ಯವನ್ನು ಒದಗಿಸಿ.

    6. ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ, ಶೈಕ್ಷಣಿಕ ಅನುದಾನಗಳು ಮತ್ತು ವಿದ್ಯಾರ್ಥಿವೇತನಗಳ ಸರಿಯಾದ ವಿತರಣೆಯನ್ನು ಖಾತ್ರಿಪಡಿಸಿ.

    7. ಅಪ್ರಜಾತಾಂತ್ರಿಕವಾಗಿ ಹೇರಿದ ನಾಲ್ಕು ವರ್ಷಗಳ ಪದವಿ ಕೋರ್ಸ್ ಹಿಂತೆಗೆದುಕೊಳ್ಳಿ.

    8. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಒದಗಿಸಿ.

    9. ವಿದ್ಯಾರ್ಥಿಗಳಿಗೆ ನೈಜ ವೈಜ್ಞಾನಿಕ ಜ್ಞಾನವನ್ನು ಪಠ್ಯದ ಮೂಲಕ ಒದಗಿಸಿ.

    10. ಪಠ್ಯಪುಸ್ತಕದಲ್ಲಿ ನಮ್ಮ ದೇಶದ ನವೋದಯದ ಮಹಾನ್ ವ್ಯಕ್ತಿಗಳು ಹಾಗೂ ಕ್ರಾಂತಿಕಾರಿಗಳ ಜೀವನ ಹೋರಾಟಗಳನ್ನು ಸೇರಿಸಿ.

    11. ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ವಿದೇಶಿ ವಿಶ್ವವಿದ್ಯಾಲಯಗಳು ನಮ್ಮ ದೇಶದಲ್ಲಿ ಬೇಡ.

    12. ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸರಿಯಾದ ಅನುದಾನ ನಿಗದಿ ಮಾಡಿ.

    13. ಎಲ್ಲಾ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳಕ್ಕೆ ಕಡಿವಾಣ ಹಾಕಿ.

    14. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಎಲ್ಲಾ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿ.

    15. ಶಿಕ್ಷಣದ ಸ್ವ-ಹಣಕಾಸು ವ್ಯವಸ್ಥೆಯನ್ನು ಉತ್ತೇಜಿಸುವುದನ್ನು ನಿಲ್ಲಿಸಿ.

    16. ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ NEET, JEE Main ಮತ್ತು JEE Advanced ಆಕಾಂಕ್ಷಿಗಳಿಗೆ ಉಚಿತ ಕೋಚಿಂಗ್ ಅನ್ನು ಒದಗಿಸಿ.

    17. ಸಾರ್ವಜನಿಕ ಬಜೆಟ್‌ ನ 3% ಅನ್ನು ಸಂಶೋಧನೆಗೆ ಮತ್ತು ಒಟ್ಟು GDP ಯ 3% ಅನ್ನು ಸಂಶೋಧನೆಗೆ ನಿಯೋಜಿಸಿ ಮತ್ತು ಎಲ್ಲಾ ಸಂಶೋಧನಾ ವಿದ್ಯಾರ್ಥಿಗಳಿಗೆ ಗೌರವಾನ್ವಿತ ಮತ್ತು ನಿಯಮಿತ ಫೆಲೋಶಿಪ್ ಅನ್ನು ಖಚಿತಪಡಿಸಿ.

    18. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ.

    ಈ ಕಾರ್ಯಕ್ರಮದಲ್ಲಿ ಎಐಡಿಎಸ್‌ ಓ ಕಚೇರಿ ಕಾರ್ಯದರ್ಶಿ ಅಕ್ಷರ್,  ಸೆಕ್ರಟೆರಿಯಟ್ ಸದಸ್ಯರಾದ  ಭರತ್, ಪಲ್ಲವಿ, ಮಿಥುನ್, ಹಾಗೂ ಕೌನ್ಸಿಲ್ ಸದಸ್ಯರಾದ ವೃಷಭ, ಹೇಮು, ಗೋಕುಲ್ ಉಪಸ್ಥಿತರಿದ್ದರು.

    ವರದಿ: ಅಕ್ಷರ  ಟಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳಿಸುತ್ತಿದ್ದಾರೆ ಎಂದು ಬಿಜೆಪಿ…

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.