ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಕೆ.ಎಸ್. ಈಶ್ವರಪ್ಪ ಅವರನ್ನು ನಿನ್ನೆಯಷ್ಟೇ ಬಿಜೆಪಿ ಪಕ್ಷ 6 ವರ್ಷ ಉಚ್ಛಾಟನೆ ಮಾಡಿದೆ. ಈ ಕುರಿತು ಇದೀಗ ಈಶ್ವರಪ್ಪ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿಯಿಂದ ಉಚ್ಛಾಟನೆ ಮಾಡಿರುವುದಕ್ಕೆ ಹೆದರುವುದಿಲ್ಲ. ಉಚ್ಛಾಟನೆ ಮಾಡಿರುವ ಆದೇಶ ನನಗೆ ಸಿಕ್ಕಿಲ್ಲ. ಮಾಧ್ಯಮಗಳಿಂದ ಇದು ಗೊತ್ತಾಗಿದೆ” ಎಂದು ಹೇಳಿದ್ದಾರೆ.
ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲು ಕೈ ಎತ್ತುವೆ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ನಿಶ್ಚಿತ. ನಾಮಪತ್ರ ವಾಪಸ್ ಪಡೆಯದೇ ಕಣದಲ್ಲಿ ಉಳಿದಿದ್ದೇನೆ. ನಾಳೆಯಿಂದ ಪ್ರಚಾರ ಕಾರ್ಯವನ್ನು ಮತ್ತಷ್ಟು ಬಿರುಸಾಗಿ ಕೈಗೊಳ್ಳುವೆ ಎಂದು ಅವರು ಹೇಳಿದರು.
ಯಡಿಯೂರಪ್ಪ ಮತ್ತು ಮಕ್ಕಳ ಕೈಯಲ್ಲಿರುವ ಪಕ್ಷವನ್ನು ಮುಕ್ತ ಮಾಡಲು ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


