ಬೆಂಗಳೂರು: ನಗರದ ಹೆಚ್ ಎಸ್ ಆರ್ ಲೇಔಟ್ ನ ಆಗರದಲ್ಲಿ ಏಪ್ರಿಲ್ 21ರ ರಾತ್ರಿ 11:30ಕ್ಕೆ, ಆಕಸ್ಮಿಕವಾಗಿ ತಂದೆಯಿಂದಲೇ ಕಾರು ಹರಿದು ಮಗು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಒಂದೂವರೆ ವರ್ಷದ ಶೈಜಾ ಜನ್ನತ್ ಮೃತ ಮಗುವಾಗಿದೆ.
ಮೃತ ಮಗುವಿನ ಕುಟುಂಬವು ಸಂಬಂಧಿಗಳ ಮದುವೆಗೆ ಹೋಗಿ ತಮ್ಮ ಸ್ವಂತ ನಿವಾಸಕ್ಕೆ ವಾಪಾಸ್ ಆಗಿದ್ದು, ಕಾರಿನಿಂದ ಇಳಿದು ಎಲ್ಲರೂ ಮನೆ ಒಳಗೆ ಹೋಗಿದ್ದರು. ಮಗುವಿನ ತಂದೆ ಕಾರಿನಿಂದ ಲಗೇಜ್ ತೆಗೆದು ಮನೆಯೊಳಗೆ ಇಡುತ್ತಿದ್ದರು. ಈ ವೇಳೆ ಮಗು ತಂದೆಯ ಹತ್ತಿರ ಓಡಿ ಬಂದಿದೆ.
ಕಾರಿನಲ್ಲಿದ್ದ ಲಗೇಜ್ ಮನೆಯೊಳಗೆ ಇಡುತ್ತಿದ್ದಾಗ ಮಗು ಕಾರಿನ ಡೋರ್ ಬಳಿಯೇ ನಿಂತಿತ್ತು. ಆದರೆ ಇದನ್ನು ತಂದೆ ಗಮನಿಸಿರಲಿಲ್ಲ. ಲಗೇಜ್ ತೆಗೆದು ಕಾರು ಚಾಲನೆ ಮಾಡಿದ ಸಂದರ್ಭ ಆಕಸ್ಮಿಕವಾಗಿ ಕಾರು ಮಗು ಮೇಲೆ ಹರಿದಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


