ಇಂದೋರ್: ಮಧ್ಯಪ್ರದೇಶದ ಇಂದೋರ್ ನಲ್ಲಿ ನೀಚ ಪತಿಯೊಬ್ಬ ತನ್ನ ಗರ್ಭಿಣಿ ಪತ್ನಿಯನ್ನೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಶಾರದಾ (35) ಮೃತ ದುರ್ದೈವಿಯಾಗಿದ್ದಾರೆ. ಉಮೇಶ್ ರಾಥೋಡ್ ಆರೋಪಿ ಪತಿಯಾಗಿದ್ದಾನೆ.
ಮೃತರು 5 ತಿಂಗಳ ಗರ್ಭಿಣಿಯಾಗಿದ್ದು, ಹಣದ ವಿಚಾರವಾಗಿ ಪತಿ-ಪತ್ನಿಯ ನಡುವೆ ಜಗಳ ನಡೆದಿದೆ. ಇದೇ ವೇಳೆ ಆರೋಪಿ ಪತಿ, ತನ್ನ 6 ವರ್ಷದ ಅಪ್ರಾಪ್ತ ಮಗಳ ಎದುರೇ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ಆಕೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.
ಚಂದನ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶ್ ನಗರದಲ್ಲಿ ಈ ಪ್ರಕರಣ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಚಂದನ್ ನಗರ ಪೊಲೀಸರು ಮತ್ತು ವಿಧಿವಿಜ್ಞಾನ ತಂಡ ಸ್ಥಳಕ್ಕೆ ಧಾವಿಸಿದ್ದಾರೆ. ಇದಾದ ಬಳಿಕ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿ ಉಮೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


