nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026

    ದೃಷ್ಟಿ ದೋಷ ನಿವಾರಣೆಗೆ ಉಪ್ಪು, ಒಣ ಮೆಣಸಿನಕಾಯಿ ಬಳಕೆ! ಈ ಸಂಪ್ರದಾಯದ ಹಿಂದಿನ ನಂಬಿಕೆ ಏನು?

    October 18, 2026

    ತುಮಕೂರು ದಸರಾದಲ್ಲಿ ಗಮನ ಸೆಳೆದ ಮಹಿಳಾ ಬೈಕ್ ರೈಡ್: ಬೈಕ್ ಚಲಾಯಿಸಿ ಗಮನ ಸೆಳೆದ ಮಹಿಳಾ ಅಧಿಕಾರಿಗಳು

    October 18, 2026
    Facebook Twitter Instagram
    ಟ್ರೆಂಡಿಂಗ್
    • ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?
    • ದೃಷ್ಟಿ ದೋಷ ನಿವಾರಣೆಗೆ ಉಪ್ಪು, ಒಣ ಮೆಣಸಿನಕಾಯಿ ಬಳಕೆ! ಈ ಸಂಪ್ರದಾಯದ ಹಿಂದಿನ ನಂಬಿಕೆ ಏನು?
    • ತುಮಕೂರು ದಸರಾದಲ್ಲಿ ಗಮನ ಸೆಳೆದ ಮಹಿಳಾ ಬೈಕ್ ರೈಡ್: ಬೈಕ್ ಚಲಾಯಿಸಿ ಗಮನ ಸೆಳೆದ ಮಹಿಳಾ ಅಧಿಕಾರಿಗಳು
    • ಆಕಾಶ ನೀಲಿಯಾಗಿ ಕಾಣುವುದೇಕೆ? ಆಕಾಶ ಕೆಂಪಾಗುವುದೇಕೆ?
    • ಸೈಕಲ್ ಗೆ ಹಾಲಿನ ಟ್ಯಾಂಕರ್ ಡಿಕ್ಕಿ:  5 ವರ್ಷದ ಮಗು ಸಾವು
    • ಟ್ರೆಕ್ಕಿಂಗ್ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಅಪಘಾತ: ಯುವತಿ ಸಾವು
    • ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ
    • ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ವಿರೋಧಿಸಿ ಸಾಂಕೇತಿಕ ಪ್ರತಿಭಟನೆ
    ರಾಜ್ಯ ಸುದ್ದಿ April 23, 2024

    ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ವಿರೋಧಿಸಿ ಸಾಂಕೇತಿಕ ಪ್ರತಿಭಟನೆ

    By adminApril 23, 2024No Comments4 Mins Read
    bengaluru 4

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕವನ್ನು ಹಾಗು ರೈತರನ್ನು ದ್ವೇಷಿಸುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂದು ಕೇಳಿದ್ದರೂ, ಇಂದಿನವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಅದಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಹಾಗೂ ದೇಶದ ಜನರ ಗಮನವನ್ನು ಸೆಳೆಯುವ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ವಿಧಾನಸೌಧ ಮುಂಭಾಗ ಇರುವ ಗಾಂಧಿ ಪ್ರತಿಮೆಯ ಎದುರು, ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವನ್ನು ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಧರಣಿಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

    ಸೆಪ್ಟೆಂಬರ್ 22 ರಂದು ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದು, ಕೇಂದ್ರ ತಂಡ 4 ದಿನಗಳ ಕಾಲ ಪರಿಶೀಲನೆ ಮಾಡಿ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ. ಈ ಮಧ್ಯೆ ಸಚಿವ ಕೃಷ್ಣಭೈರೇಗೌಡ ಹಾಗೂ ಪ್ರಿಯಾಂಕ ಖರ್ಗೆ ಸಂಬಂಧ ಪಟ್ಟ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ಎದುರಿಸುತ್ತಿರುವ ಬರಗಾಲದ ಬಗ್ಗೆ ವಿವರಿಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದೇವೆ. 100 ವರ್ಷಗಳ ನಂತರ ಇಂಥ ಬರಗಾಲ ಎದುರಾಗಿದೆ. ಮನವಿ ಕೊಟ್ಟಿದ್ದರೂ ಕೂಡ ಅಮಿತ್ ಶಾ ಚನ್ನಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಮನವಿಯನ್ನು ವಿಳಂಬವಾಗಿ ಸಲ್ಲಿಸಿದ್ದಾರೆ ಎಂದು ಹೇಳಿದ್ದರು ಎಂದರು.

    ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ:

    ನಿರ್ಮಲಾ ಸೀತಾರಾಮನ್ ಅವರು ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿದ್ದಾರೆ. ಬರಗಾಲಕ್ಕೆ ಅಲ್ಲ ಎಂದು ಇಬ್ಬರೂ ಸುಳ್ಳು ಹೇಳಿದ್ದಾರೆ. ನಾವು ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ. ನಮಗೆ ಬೇಕಾಗಿಯೂ ಇಲ್ಲ ಎಂದರು.

    ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ:

    ಗ್ಯಾರಂಟಿಗಳಿಗೆ ನಮ್ಮ ಸಂಪನ್ಮೂಲದಿಂದಲೇ ಭರಿಸಿದ್ದೇವೆ. 36000 ಕೋಟಿ ರೂಪಾಯಿಗಳನ್ನು ಕಳೆದ ವರ್ಷ ಹಾಗೂ 52009 ಕೋಟಿ ರೂಪಾಯಿಗಳನ್ನು ಮುಂದಿನ ಸಾಲಿಗೆ ಮೀಸಲಿರಿಸಿದ್ದೇವೆ. ಬರಗಾಲಕ್ಕೆ 48000 ಹೆಕ್ಟೇರ್ ಪ್ರದೇಶ ಮಳೆ ಇಲ್ಲದೇ ಬೆಳೆ ನಷ್ಟವಾಗಿದೆ. ರೈತರು ಕಷ್ಟದಲ್ಲಿದ್ದಾರೆ. ನಮ್ಮ ಸರ್ಕಾರ 2000 ರೂ.ಗಳ ವರೆಗೆ 34 ಲಕ್ಷ ರೈತರಿಗೆ ನೀಡಲಾಗಿದೆ. 650 ಕೋಟಿ ರೂ.ಗಳನ್ನು ಇದಕ್ಕಾಗಿ ವೆಚ್ಚ ಮಾಡಲಾಗಿದೆ. ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ. ಕುಡಿಯುವ ನೀರು, ಮೇವು, ಜನರಿಗೆ ಕೆಲಸ, ಗುಳೇ ಹೋಗುವುದನ್ನು ತಪ್ಪಿಸುವುದು, ರೈತರಿಗೆ ಮೊದಲ ಕಂತಿನ ಪರಿಹಾರ ನೀಡುವುದನ್ನು ಮಾಡಿದ್ದೇವೆ.

    ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ:

    18172 ಕೋಟಿ ಗಳನ್ನೂ ಕೇಂದ್ರಕ್ಕೆ ಎನ್.ಡಿ.ಆರ್.ಎಫ್ ನಿಂದ ಬಿಡುಗಡೆ ಮಾಡುವಂತೆ ಕೋರಿ ಒತ್ತಾಯ ಮಾಡಿದ್ದೇವೆ. ಇದನ್ನು ಮಂಡಿಸಿ 7 ತಿಂಗಳಾಗಿವೆ. ನಾನೇ ಸ್ವತಃ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿದ್ದೇನೆ. ಸಂಬಂಧಪಟ್ಟವರಿಗೆ ತಿಳಿಸಿ ಕೂಡಲೇ ಬಿಡುಗಡೆ ಮಾಡುವಂತೆ ಹೇಳುವುದಾಗಿ ಹೇಳಿದ್ದರು. ನಂತರ ನಾನು ಕೃಷ್ಣಭೈರೇಗೌಡ ಡಿಸೆಂಬರ್ 20 ತಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ಡಿಸೆಂಬರ್ 23ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಭರವಸೆ ನೀಡಿ ಈವರೆಗೆ ಏನೂ ಮಾಡಿಲ್ಲ. ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ. ರಾಜ್ಯಕ್ಕೆ ಮೇಲಿನಿಂದ ಮೇಲೆ ಬರಲು ಯಾವುದೇ ನೈತಿಕತೆ ಇಲ್ಲ ಎಂದು ಹೇಳಿ ಪ್ರತಿಭಟಿಸಿ ಅವರ ಗಮನಕ್ಕೆ ತರುವ ಕೆಲಸ ಮಾಡಿದ್ದೇವೆ ಎಂದರು.

    ಗೋ ಬ್ಯಾಕ್ ನರೇಂದ್ರ ಮೋದಿ ಅಮಿತ್ ಶಾ:

    ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ನಲ್ಲಿಯೇ ಹೇಳಿದರು. ಬಜೆಟ್ ಸಂಸತ್ತಿನಲ್ಲಿ ಅನುಮೋದನೆಯಾಗಿದೆ. ಬೊಮ್ಮಾಯಿಯವರೂ ಕೂಡ ತಮ್ಮ ಬಜೆಟ್ ನಲ್ಲಿ ಧನ್ಯವಾದ ಹೇಳಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿ ಇಂದಿನವರೆಗೆ ಯಾವುದೂ ಆಗಿಲ್ಲ. ಅದರ ಜೊತೆಗೆ 15 ನೆ ಹಣಕಾಸು ಆಯೋಗ 5495 ಕೋಟಿ ವಿಶೇಷ ಅನುದಾನವನ್ನು ಕೊಡಲಿಲ್ಲ. ಕೊಡದೇ ಈರಲು ಕಾರಣ ನಿರ್ಮಲಾ ಸೀತಾರಾಮನ್ ಹಾಗೂ ನರೇಂದ್ರ ಮೋದಿ ಅವರು. ಪೆರಿ ಫೆರಲ್ ರಿಂಗ್ ರೋಡ್ ಗೆ 3000 ಕೋಟಿ ಹಾಗು ಬೆಂಗಳೂರಿನ ಅಭಿವೃದ್ಧಿಗೆ 3000ಕೋಟಿ ಕೊಡಿ ಎಂದು ಶಿಫಾರಸು ಮಾಡಿದ್ದರೂ ಕೊಡಲಿಲ್ಲ. ಬರಪರಿಹಾರಕ್ಕೂ ಒಂದು ರೂ.ಇಲ್ಲ.  ನರೇಂದ್ರ ಮೋದಿ ಅವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ ಗೋ ಬ್ಯಾಕ್ ನರೇಂದ್ರ ಮೋದಿ, ಗೂ ಬ್ಯಾಕ್ ಅಮಿತ್ ಶಾ ಎಂದು ಹೇಳುತ್ತಿದ್ದೇವೆ ಎಂದರು.

    ಅಮಿತ್ ಶಾ ಬರಪರಿಹಾರ ಕೊಟ್ಟು ರಾಜ್ಯಕ್ಕೆ ಬರಲಿ:

    ಇಂದು ಬರುತ್ತಿರುವ ಅಮಿತ್ ಶಾ ಅವರು ಸಭೆ ನಡೆಸಿ 18171 ಕೋಟಿ ಕೊಟ್ಟು ಆಮೇಲೆ ರಾಜ್ಯಕ್ಕೆ ಬರಲಿ. ನಿಮಗೆ ಯಾವುದೇ ಮತ ಕೇಳುವ ಹಕ್ಕು ಇಲ್ಲ ಎಂದು ಅವರಿಗೆ ಹೇಳುತ್ತೇವೆ. ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ ಎಂದರು.

    ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಸ್ಥಿತಿ:

    ರಾಜ್ಯ ಸರ್ಕಾರ ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಪರಿಸ್ಥಿತಿ ಬಂತು. ಅಲ್ಲಿ ಅಟಾರ್ನಿ ಜನರಲ್ ಅವರು ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೇಳಿದ ಸುಳ್ಳಿನ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ತೆರಿಗೆ ಅನ್ಯಾಯದ ಬಗ್ಗೆ ರಾಜ್ಯ ಸರ್ಕಾರ ಸೂಕ್ತವಾದ  ಹಾಗೂ ಸತ್ಯಾಂಶವನ್ನು ಮಂಡಿಸಿದ್ದರಿಂದ ಕರ್ನಾಟಕದ ಮೇಲೆ ಕರುಣೆ ತೋರಿತು. ಸರ್ವೋಚ್ಚ ನ್ಯಾಯಾಲಯ ನಮ್ಮ ಪರವಾಗಿ ಕರುಣೆ ತೋರಿದೆ ಎಂದರು. ಒಂದು ವೇಳೆ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗದೇ ಹೋಗಿದ್ದರೆ ಒಂದು ರೂ.ಪರಿಹಾರ ನೀಡುತ್ತಿರಲಿಲ್ಲ ಎಂದರು.

    ನ್ಯಾಯವನ್ನು ಕೇಳಲು ಜನತಾ ನ್ಯಾಯಾಲಯದ ಮೊರೆ:

    ರಾಜ್ಯದ ಪರವಾಗಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಭಾರತೀಯ ಚೆಂಬು ಪಕ್ಷದ ಸುಳ್ಳುಗಳನ್ನು ಜನತೆಗೆ ತೋರಿಸುತ್ತೇವೆ ಎಂದರು.  ಈಗಾಗಲೇ ಸರ್ವೋಚ್ಚ ನ್ಯಾಯಾಲಯಕ್ಕೇ ಹೋಗಿದ್ದೇವೆ. ನ್ಯಾಯವನ್ನು ಕೇಳಲು ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ. ಮೋದಿ ಸರ್ಕಾರವನ್ನು ಕರ್ನಾಟಕದಿಂದ ಮಾತ್ರವಲ್ಲದೆ ಭಾರತದ ಇತರೆಡೆಗಳಿಂದಲೂ ಕಿತ್ತು ಹಾಕಲು ಪ್ರಯತ್ನಿಸುತ್ತೇವೆ ಎಂದು ರಂದೀಪ್ ಸುರ್ಜೀವಾಲ ಹೇಳಿದರು.

    ಅನ್ಯಾಯ ಸಹಿಸಲು ಸಾಧ್ಯವಿಲ್ಲ:

    ರಾಜಕೀಯ ಸಂಘರ್ಷ ಮುಂದುವರೆದರೆ ರಾಜ್ಯಕ್ಕೆ ಬರಬೇಕಾದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುವ ಸಾಧ್ಯತೆ ಇಲ್ಲವೇ.. ತೊಂದರೆಯಾಗುವುದಿಲ್ಲವೇ.. ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹಾಗಾದರೆ ನ್ಯಾಯ ಕೊಡಲಿ. ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದರು.

    ಪ್ರತಿಭಟನೆಯಲ್ಲಿ  ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ, ಸಚಿವರಾದ ಕೃಷ್ಣಭೈರೇಗೌಡ, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ,ಬೈರತಿ ಸುರೇಶ್, ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    Comments are closed.

    Our Picks

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026

    ವಿಶ್ವದ ಜನಪ್ರಿಯ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ಹೆಸರಿನಲ್ಲಿ ನಕಲಿ ಆ್ಯಪ್‌ ವೊಂದು ಗೂಗಲ್ ಪ್ಲೇ ಸ್ಟೋರ್‌ ನಲ್ಲಿ ಕಾಣಿಸಿಕೊಂಡಿರುವುದು ಆತಂಕಕ್ಕೆ…

    ದೃಷ್ಟಿ ದೋಷ ನಿವಾರಣೆಗೆ ಉಪ್ಪು, ಒಣ ಮೆಣಸಿನಕಾಯಿ ಬಳಕೆ! ಈ ಸಂಪ್ರದಾಯದ ಹಿಂದಿನ ನಂಬಿಕೆ ಏನು?

    October 18, 2026

    ತುಮಕೂರು ದಸರಾದಲ್ಲಿ ಗಮನ ಸೆಳೆದ ಮಹಿಳಾ ಬೈಕ್ ರೈಡ್: ಬೈಕ್ ಚಲಾಯಿಸಿ ಗಮನ ಸೆಳೆದ ಮಹಿಳಾ ಅಧಿಕಾರಿಗಳು

    October 18, 2026

    ಆಕಾಶ ನೀಲಿಯಾಗಿ ಕಾಣುವುದೇಕೆ? ಆಕಾಶ ಕೆಂಪಾಗುವುದೇಕೆ?

    October 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.