nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಂದಿನ ಐದು ವರ್ಷದವರೆಗೆ ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನ ಮಾಡಿ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕರೆ
    ತುಮಕೂರು April 24, 2024

    ಮುಂದಿನ ಐದು ವರ್ಷದವರೆಗೆ ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನ ಮಾಡಿ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕರೆ

    By adminApril 24, 2024No Comments3 Mins Read
    tumakuru

    ತುಮಕೂರು:  ಮುಂದಿನ ಐದು ವರ್ಷದವರೆಗೆ  ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನವನ್ನು ಜನತೆ  ಮಾಡಬೇಕು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಕರೆ ನೀಡಿದರು.

    ಸೋಮವಾರ  ತುಮಕೂರಿನಲ್ಲಿ  ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡ ರವರ ಪರವಾಗಿ ಮತ ಯಾಚನೆ ಮಾಡಿ ನಂತರ  ಮಾತನಾಡಿದ ಅವರು


    Provided by
    Provided by

    ಏಪ್ರಿಲ್ 26 ರಂದು ಜನ ಮಾಡುವ ತೀರ್ಮಾನ ದೇಶದ ಹಿತದಷ್ಟಿಯಿಂದ ಮಹತ್ವವಾದುದು. ಮುಂದಿನ ಐದು ವರ್ಷದವರೆಗೆ  ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನವನ್ನು ನೀವು ಮಾಡಬೇಕು. ನಿಮ್ಮನ್ನು ಮುನ್ನಡೆಸಲು ಯಾರಿಗೆ ಯೋಗ್ಯತೆ ಇದೆ ಎಂದು ನಿಮ್ಮ ಮತದ ಮೂಲಕ ನಿರ್ಧರಿಸಬೇಕು. ಸಂಸತ್ತಿನಲ್ಲಿ ನಿಮ್ಮ ಧ್ವನಿಯನ್ನು ಸಮರ್ಥವಾಗಿ ಪ್ರತಿನಿಧಿಸುವ ಸಂಸತ್ತಿಗೆ ಹೋಗಬೇಕು. ರಾಜ್ಯದ ಹಿತ ಕಾಪಾಡುವವರು ಸಂಸತ್ತಿನಲ್ಲಿದ್ದರೆ ರಾಜ್ಯಕ್ಕೆ ಹಿತ ಎಂದರು.

    ತೆರಿಗೆ ಹಂಚಿಕೆಯಲ್ಲಿ ದೊಡ್ಡ ಅನ್ಯಾಯ:

    ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ದೊಡ್ಡ ಅನ್ಯಾಯವಾಗಿದೆ.  15   ನೇ ಹಣಕಾಸು ಆಯೋಗ 5495 ಕೋಟಿ ಅನುದಾನ ಶಿಫಾರಸ್ಸು ಮಾಡಿದರೆ ನಿರ್ಮಲಾ ಸೀತಾರಾಮನ್ ಇದನ್ನು ಕೊಡಲು ಬರೋಲ್ಲ ಎಂದು ಕೊಡಲಿಲ್ಲ. ಪೆರಿಫೆರಲ್ ರಿಂಗ್ ರೋಡ್, ಹಾಗೂ ಬೆಂಗಳೂರಿನ ಕೆರೆಗಳ ಅಭಿವೃದ್ಧಿಗೆ ಶಿಫಾರಸ್ಸು ಮಾಡಿದ್ದ ತಲಾ 3000 ಕೋಟಿ ರೂ ಸೇರಿದಂತೆ ಒಟ್ಟು 11495 ಕೋಟಿ  ರೂಪಾಯಿ ರಾಜ್ಯಕ್ಕೆ ಬರಲಿಲ್ಲ. ಕರ್ನಾಟಕಕ್ಕೆ ಏನೂ ಕೊಡಬೇಕಿಲ್ಲ ಎಂದು ನಿರ್ಮಲಾ ಸೀತಾರಾಮನ್ ಸುಳ್ಳು ಹೇಳುತ್ತಿದ್ದಾರೆ ಎಂದರು.

    ಬಿಜೆಪಿಯಿಂದ ಮಲತಾಯಿ ಧೋರಣೆ:

    ಭದ್ರಾ ಮೇಲ್ಡಂಡೆ ಯೋಜನೆಗೆ 5300 ಕೋಟಿ ರೂ. ಬಜೆಟ್ನಲ್ಲಿ ಇರುವುದಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಘೋಷಿಸಿದ್ದರೂ , ಇದುವರೆಗೆ ಒಂದು ರೂಪಾಯಿಯನ್ನೂ ರಾಜ್ಯದ ಈ ಯೋಜನೆಗೆ ನೀಡಲಿಲ್ಲ. ಇದು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ತೋರಿಸುತ್ತಿರುವ ಮಲತಾಯಿ ಧೋರಣೆ. ಆದ್ದರಿಂದ ರಾಜ್ಯದ ಪರವಾಗಿ ಧ್ವನಿಎತ್ತುವ ಸಂಸದರನ್ನು ಆಯ್ಕೆ ಮಾಡಿಕಳುಹಿಸಬೇಕು ಎಂದರು.

    ಸೋಮಣ್ಣ ವಸತಿಸಚಿವರಾಗಿ ಸಂಪೂರ್ಣ ವಿಫಲ:

    ಸೋಮಣ್ಣನವರು  ಉತ್ತಮ ಸಂಸದನಾಗಿ ಕೆಲಸಮಾಡುವುದಾಗಿ ಹೇಳುತ್ತಾರೆ. ಆದರೆ ಅವರು ವಸತಿ ಸಚಿವರಾಗಿದ್ದಾಗ ತುಮಕೂರಿಗೆ ಎಷ್ಟು ಮನೆಗಳನ್ನು ನೀಡಿದಿರಿ ಎಂದು ಇಲ್ಲಿನ ಜನರಿಗೆ ದಾಖಲಾತಿ ನೀಡಿ. ನಿಮ್ಮ ಅವಧಿಯಲ್ಲಿ ಒಂದೂ ಮನೆಯನ್ನು ಕಟ್ಟಲಿಲ್ಲವೇಕೆ ಎಂಬ ನಮ್ಮ ಪ್ರಶ್ನೆಗೆ ಅವರ ಬಳಿ ಅಂದು ಉತ್ತರವಿರಲಿಲ್ಲ. ಆದ್ದರಿಂದ ವಸತಿ ಸಚಿವರಾಗಿ ವಿಫಲವಾಗಿರುವ ಸೋಮಣ್ಣನವರ ಉತ್ತಮವಾಗಿ ಕೆಲಸ ಮಾಡುತ್ತೇನೆ ಎನ್ನುವ ಮಾತು ಸಂಪೂರ್ಣ ಸುಳ್ಳು ಎಂದರು.

    2014 ರಿಂದ ಮೋದಿಯವರು ಸುಳ್ಳು ಆಶ್ವಾಸನೆ ನೀಡುತ್ತಿದ್ದಾರೆ:

    ಕಳೆದ ಹತ್ತು ವರ್ಷದಿಂದ ಪ್ರಧಾನಿ ಮೋದಿಯವರು ಸಮಾಜದ ಯಾವ ವರ್ಗಕ್ಕೂ ಯಾವುದೇ ಕೆಲಸ ಮಾಡಲಿಲ್ಲ. ಜನರ ಖಾತೆಗೆ 15 ಲಕ್ಷ ಹಾಕಲಿಲ್ಲ. 2014ರಂದು ಮೋದಿಯವರು ಸುಳ್ಳು ಆಶ್ವಾಸನೆಗಳನ್ನು ನಿಡಿದ್ದಾರೆ. ನಿರುದ್ಯೋಗಿಗಳಿಗೆ 20 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ. ಯುವಜನರಿಗೆ ಪಕೋಡಾ ಮಾರುವಂತೆ ಹೇಳಿದ ಮೋದಿಯವರು ಪ್ರಧಾನಿಯಾಗಲು ಯೋಗ್ಯರೇ ಎಂದು ನೀವೇ ನಿರ್ಧರಿಸಬೇಕು ಎಂದರು.

    ಬಿಜೆಪಿಯಿಂದ ರಾಜ್ಯದ ಜನರಿಗೆ ‘ಖಾಲಿ ಚೊಂಬು’

    ಅಗತ್ಯವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಪೆಟ್ರೋಲ್, ಡೀಸೆಲ್, ಆಹಾರ ಪದಾರ್ಥಗಳು, ಗ್ಯಾಸ್ ಸೇರಿದಂತೆ ಎಲ್ಲದರ ಬೆಲೆಗಳು ಇಳಿಯಲಿಲ್ಲ. ರೈತರ ಆದಾಯ ದ್ವಿಗುಣಗೊಳಿಸಲಿಲ್ಲ. ಸಾಲಮನ್ನಾ , ಬೆಳೆಗಳಿಗೆ ನ್ಯಾಯಯುವ ಬೆಲೆ ನೀಡುವ ಅನುಕೂಲತೆ ಮಾಡಲಿಲ್ಲ. 2014ರಲ್ಲಿ ಡಾಲರ್ ಬೆಲೆ 58 ರೂ. , ಆದರೆ ಇಂದು ಒಂದು ಡಾಲರ್ ಬೆಲೆ 83 ರೂ.ಆಗಿದ್ದು, ಮೋದಿಯವರು ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ . ಈ ರೀತಿ ಬಿಜೆಪಿಯವರು ರಾಜ್ಯದ ಜನರಿಗೆ ಖಾಲಿ ಚೊಂಬನ್ನು ನೀಡಿದ್ದಾರೆ. ಆದರೆ ದೇವೇಗೌಡರು ಖಾಲಿ ಚೊಂಬನ್ನು ಅಕ್ಷಯಪಾತ್ರೆಯೆಂದು  ಸುಳ್ಳು ಹೇಳುತ್ತಿದ್ದಾರೆ ಬಿಜೆಪಿಯೊಂದು ಕೋಮುವಾದಿ ಪಕ್ಷ ಎಂದರು.

    ರಾಜ್ಯದ ಹಿತ ಕಾಪಾಡುವವ ರನ್ನು ಗೆಲ್ಲಿಸಿ

    223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದು ಸೆಪ್ಟೆಂಬರ್ ನಲ್ಲಿ ಮನವಿ ಸಲ್ಲಿಸಿದ್ದು, ಅಕ್ಟೋಬರ್ ನಲ್ಲಿ ವರದಿ ಸಲ್ಲಿಸಿದ್ದರೂ ಕೇಂದ್ರ ತಂಡ ವರದಿ ಕೊಟ್ಟ ಒಂದು ತಿಂಗಳಲ್ಲಿ ಪರಿಹಾರ ನೀಡಬೇಕೆಂಬ ಕಾನೂನು ಇದ್ದರೂ ಒಂದು ರೂ. ಕೊಟ್ಟಿಲ್ಲ. ಅಮಿತ್ ಶಾ ವರದಿ ಕೊಟ್ಟಿದ್ದೇ ತಡವಾಗಿ ಎಂದು ಅಪ್ಪಟ ಸುಳ್ಳು ಹೇಳುತ್ತಾರೆ ಎಂದರು. ಈ ಅನ್ಯಾಯದ ಬಗ್ಗೆ ಮಾತನಾಡುವ ಧೈರ್ಯ 25 ಲೋಕಸಭಾ ಸದಸ್ಯ ರಿಗೂ ಇಲ್ಲ ಎಂದರು. ಇಂಥವರು ರಾಜ್ಯದ ಹಿತವನ್ನು ಕಾಪಾಡಲು ಸಾಧ್ಯವಿಲ್ಲ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

    ಮಾಜಿ ಪ್ರಧಾನಿ ದೇವೇಗೌಡರು  ಈಗ  ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ನರೇಂದ್ರ ಮೋದಿ ಯವರನ್ನು ಹಾಡಿ ಹೊಗಳುವ ಮಟ್ಟಕ್ಕೆ ಹೋದರೆಂದು ವ್ಯಥೆ ಯಾಗುತ್ತಿದೆ ಎಂದರು.

    ನಮ್ಮಲ್ಲಿ ಪ್ರಧಾನಿಯಾಗುವ ಯೋಗ್ಯತೆ ಇರುವ ಬಹಳಷ್ಟು ಜನರಿದ್ದಾರೆ

    ದೇವೇಗೌಡರು ದೇಶದ ಪ್ರಧಾನಿಯಾಗುವಾಗ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿರಲಿಲ್ಲ. ಅದೃಷ್ಟದಿಂದ ಪ್ರಧಾನಿಯಾದರು. ರಾಹುಲ್ ಗಾಂಧಿ ನರೇಂದ್ರ ಮೋದಿ ಯವರಿಗಿಂತ ಕಡಿಮೆ ಏನಿಲ್ಲ. ನಮ್ಮಲ್ಲಿ ಪ್ರಧಾನಿಯಾಗುವ ಯೋಗ್ಯತೆ ಇರುವ ಬಹಳಷ್ಟು ಜನರಿದ್ದಾರೆ. ನರೇಂದ್ರ ಮೋದಿ ಅವರನ್ನು ಬಿಟ್ಟರೆ ಯಾರಿಲ್ಲ ಎನ್ನುತ್ತಾರೆ. ಒಂದು ಕಾಲದಲ್ಲಿ ನೆಹರೂ ಅವರ ನಂತರ ಪ್ರಧಾನಿ ಯಾರು ಎಂಬ ಪ್ರಶ್ನೆಗೆ ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಮನ್ ಮೋಹನ್ ಸಿಂಗ್ ಅವರು  ಉತ್ತಮ ಕೆಲಸ ಮಾಡಲಿಲ್ಲವೇ? ಎಂದು ಪ್ರಶ್ನಿಸಿದರು. ನರೇಂದ್ರ ಮೋದಿ ಬಿಟ್ಟರೆ ಪ್ರಧಾನಿಯಾಗಲು ಯಾರೂ ಇಲ್ಲ ಎಂದು ದೇವೇಗೌಡರು  ಸ್ವಾರ್ಥಕ್ಕಾಗಿ ಹೇಳುವ ಮಾತುಗಳು ಎಂದರು. ಇದು ಅವರಿಗೆ ಶೋಭೆ ಕೊಡುವ ಮಾತುಗಳಲ್ಲ ಎಂದರು.

    ಸುಳ್ಳು ಹೇಳುವವರನ್ನು ತಿರಸ್ಕರಿಸಿ

    ಬೆಲೆಯೇರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ್ದೇವೆ.

    ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಾವು ಸತ್ಯ ಹೇಳುತ್ತಿದ್ದೇವೆ, ಬಿಜೆಪಿ ಸುಳ್ಳು ಹೇಳುತ್ತಿದೆ. ಸುಳ್ಳು ಹೇಳುವವರನ್ನು ತಿರಸ್ಕಾರ ಮಾಡಬೇಕು ಎಂದು ಕರೆ ನೀಡಿದರು. ನುಡಿದಂತೆ ನಡೆದಿದ್ದೇವೆ. ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಬಜೆಟ್ ನಲ್ಲಿ 52000 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ನಮ್ಮ ಅಭ್ಯರ್ಥಿಯನ್ನು ಆಶೀರ್ವಾದ ಮಾಡಿ ಲೋಕಸಭೆಗೆ ಕಳಿಸಿಕೊಡಬೇಕೆಂದು  ಹೇಳಿದರು.  ಸಚಿವರಾದ ಪರಮೇಶ್ವರ್, ಕೆ.ಎನ್.ರಾಜಣ್ಣ, ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಖರ ಗೌಡ, ಪಕ್ಷದ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳಿಸುತ್ತಿದ್ದಾರೆ ಎಂದು ಬಿಜೆಪಿ…

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.