ಯಾದಗಿರಿ: ಯಾದಗಿರಿ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿದೆ. ನಗನೂರು ಗ್ರಾಮದ ಹೈಯಾಳಪ್ಪ(11), ಶರಣಬಸವ(10) ಹಾಗೂ ಅನಿಲ್(10) ಮೃತ ಬಾಲಕರಾಗಿದ್ದಾರೆ.
ಗ್ರಾಮದ ಕೆರೆಯಲ್ಲಿ ಈಜಾಡಲು ತೆರಳಿದ್ದ ವೇಳೆ ಕೆರೆಯಲ್ಲಿ ಕೆಸರಿನಲ್ಲಿ ಸಿಲುಕಿ ಬಾಲಕರು ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ಗ್ರಾಮಸ್ಥರು ಮೃತ ಬಾಲಕರ ಮೃತದೇಹ ಹೊರತೆಗೆದಿದ್ದಾರೆ. ಘಟನಾ ಸ್ಥಳದಲ್ಲಿ ಮೃತ ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


