ನಾಳೆ ನಡೆಯಲಿರುವ ಚುನಾವಣೆಯಲ್ಲಿ, ಕೊರಟಗೆರೆ ವಿಧಾನಸಭಾ ಕ್ಷೇತ್ರದ 240 ಮತಗಟ್ಟೆಗಳಲ್ಲಿ 2100 ಚುನಾವಣ ಸಿಬ್ಬಂದಿಗಳ ನಿಯೋಜನೆ ಮಾಡಿದ್ದು, 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳ ಜೊತೆ ಕೇರಳ ಪೊಲೀಸ್ ಹಾಗೂ ಸಿ ಆರ್ ಪಿ ಎಫ್ ಮಿಲಿಟರಿ ಪಡೆ ಹದ್ದಿನ ಕಣ್ಗಾವಲಲ್ಲಿ ಈ ಚುನಾವಣೆ ನಡೆಯುತ್ತಿದೆ.
“18 ವರ್ಷ ಮೇಲ್ಪಟ್ಟ ಎಲ್ಲ ಮತದಾರರು ತಮ್ಮ ತಮ್ಮ ಕ್ಷೇತ್ರದ ಮತಗಟ್ಟೆಗಳಿಗೆ ತೆರಳಿ ಮತದಾನವನ್ನು ಮಾಡಿ” ಎಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರದ ಮತದಾರರ ಸಂಖ್ಯೆ ಈ ಕೆಳಗಿನಂತಿದೆ:
ಪುರುಷ ಮತದಾರರು :-102837
ಮಹಿಳಾ ಮತದಾರರು :-104513
ಒಟ್ಟು ಮತದಾರರ ಸಂಖ್ಯೆ :- 207361..
ತಪ್ಪದೇ ನಾಳೆ ಮತದಾನ ಕೇಂದ್ರಕ್ಕೆ ತೆರಳಿ ಎಲ್ಲರೂ ಮತದಾನವನ್ನು ಮಾಡಿ. ಇದು ನಮ್ಮ ಹಕ್ಕು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


