ತುಮಕೂರು: ಪಿಯುಸಿ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನದ ಫಲಿತಾಂಶ ಹೊರಬಿದ್ದಿದ್ದು, ವಾಣಿಜ್ಯ ವಿಭಾಗದಲ್ಲಿ ಗ್ಯಾಸ್ ಸಿಲಿಂಡರ್ ವಿತರಕನ ಪುತ್ರಿ ರಾಜ್ಯಕ್ಕೆ 3ನೇ ಸ್ಥಾನ ಗಳಿಸಿದ್ದಾರೆ.
ತುಮಕೂರಿನ ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪವಿತ್ರಾ ಜಿ.ಬಿ. ಅವರು ಮರುಮೌಲ್ಯಮಾಪನದಲ್ಲಿ ಮೊದಲಿಗಿಂತ 4 ಅಂಕಗಳನ್ನು ಹೆಚ್ಚು ಪಡೆದಿದ್ದಾರೆ. ಈ ಮೂಲಕ ಒಟ್ಟು 595 ಅಂಕಗಳನ್ನು ಪಡೆದು ರಾಜ್ಯಕ್ಕೆ 3ನೇ ಸ್ಥಾನ ಪಡೆದಿದ್ದಾರೆ.
ಮೊದಲಿಗೆ ಪ್ರಕಟಗೊಂಡ ಫಲಿತಾಂಶದಲ್ಲಿ ಪವಿತ್ರಾ 591 ಅಂಕಗಳನ್ನು ಪಡೆದಿದ್ದರು. ಕನ್ನಡದಲ್ಲಿ 99, ವ್ಯವಹಾರ ಅಧ್ಯಯನದಲ್ಲಿ 95 ಅಂಕಗಳು ಬಂದಿದ್ದವು. ಈ ಎರಡು ವಿಷಯಗಳನ್ನು ಮರುಮೌಲ್ಯಮಾಪನಕ್ಕೆ ಹಾಕಿದಾಗ ಕನ್ನಡದಲ್ಲಿ 1. ವ್ಯವಹಾರ ಅಧ್ಯಯನದಲ್ಲಿ 3 ಅಂಕಗಳು ಹೆಚ್ಚುವರಿಯಾಗಿ ಬಂದಿವೆ. ಇದರೊಂದಿಗೆ ಒಟ್ಟು 595 ಅಂಕಗಳನ್ನು ಪಡೆದು ವಾಣಿಜ್ಯ ವಿಭಾದಲ್ಲಿ ರಾಜ್ಯಕ್ಕೆ 3ನೇ ಸ್ಥಾನ ಬಂದಿದ್ದಾರೆ.
ಪವಿತ್ರಾ ಅವರ ತಂದೆ ಬಸವರಾಜು ಸಿಲಿಂಡರ್ ವಿತರಕರಾಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಗೃಹಿಣಿಯಾಗಿದ್ದಾರೆ. ಪುತ್ರಿಯ ಸಾಧನೆಗೆ ತಂದೆ ಹಾಗೂ ಕಾಲೇಜಿನ ಉಪನ್ಯಾಸಕರು ಸಂತಸ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


