ನವದೆಹಲಿ: ಕೇಂದ್ರ ಸರ್ಕಾರದಿಂದ ತೆರಿಗೆ ಪಾಲು ಬಾರದ ಹಿನ್ನೆಲೆ ರಾಜ್ಯ ಸರ್ಕಾರದ ನಿರಂಗತರ ಹೋರಾಟದ ಬಳಿಕ ಇದೀಗ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ.
ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿಗೆ ಚಂಡಮಾರುತ ಹಾಗೂ ಪ್ರವಾಹ ಪರಿಹಾರವೆಂದು 275 ಕೋಟಿ ರೂ. ನೀಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ರೂ. ಹಣದ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರದ ಹಿನ್ನೆಲೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನ ಮೊರೆ ಹೋಗಿತ್ತು.
ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್‍ಗೆ ಹೇಳಿತ್ತು. ಅದರಂತೆ ಇದೀಗ ಕೇಂದ್ರ ಸರ್ಕರ ಬರ ಪರಿಹಾರ ಘೋಷಣೆ ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA