ಮೈಸೂರು: ನಕಲಿ ನಂದಿನಿ ತುಪ್ಪ ತಯಾರಿಕಾ ಘಟಕ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮೈಮುಲ್ ಅಧಿಕಾರಿಗಳು ನಾಲ್ವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಜೊತೆಗೆ ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ, ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೈಮುಲ್ ಅಧ್ಯಕ್ಷ ಪ್ರಸನ್ನ, ಈ ಪ್ರಕರಣದಲ್ಲಿ ಮುರುಗೇಶ್, ಅಶ್ವಿನಿ, ಸಂತೋಷ್, ಕುಮಾರ್ ಎಂಬುವವರ ವಿರುದ್ಧ ನೇರವಾಗಿ ಎಸ್ಪಿಗೆ ದೂರು ನೀಡಿದ್ದು, ಈ ಸಂಬಂಧ ಎಫ್ ಐಆರ್ ಕೂಡ ದಾಖಲಾಗಿದೆ ಎಂದು ತಿಳಿಸಿದರು.
ನಾನು ಕೂಡಾ ಸ್ಥಳ ಪರಿಶೀಲನೆ ಮಾಡಿ ಬಂದಿದ್ದು, ನಕಲಿ ತುಪ್ಪ ತಯಾರಿಕೆಯಲ್ಲಿ ಯಾರೇ ಭಾಗಿಯಾದ್ದರೂ ಕ್ರಮ ಕೈಗೊಳ್ಳಲಾಗುತ್ತದೆ. ಮೈಮುಲ್ ಸಿಬ್ಬಂದಿ ಭಾಗಿಯಾಗಿದ್ದರೆ ಅವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ನಮ್ಮ ಸಿಬ್ಬಂದಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದರೆ ಸೇವೆಯಿಂದಲೇ ವಜಾ ಮಾಡುತ್ತೇವೆ, ಜೈಲಿಗೂ ಕಳುಹಿಸುತ್ತೇವೆ. ಅನೇಕ ದಿನಗಳಿಂದ ಮೈಸೂರಿನ ಹೊರವಲಯದ ಹೊಸಹುಂಡಿಯಲ್ಲಿ ನಕಲಿ ತುಪ್ಪ ತಯಾರಿಕೆ ಮಾಡಲಾಗುತ್ತಿತ್ತು ಎಂಬುದು ತಿಳಿದು ಬಂದಿದ್ದು, ಅಲ್ಲಿಗೂ ನಾವು ಭೇಟಿ ನೀಡಿ, ನಕಲಿ ತುಪ್ಪ ತಯಾರಿಕೆ ಘಟಕವನ್ನು ಸೀಜ್ ಮಾಡಿಸಿದ್ದೇವೆ. ಇದೇ ಮೊದಲು ಈ ಇಂತಹ ಕಲಬೆರಕೆ ಜಾಲ ಕಂಡು ಬಂದಿದೆ. ಸರ್ಕಾರದ ಮಟ್ಟದಲ್ಲಿ ತನಿಖೆಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700