ಚಾಮರಾಜನಗರ ಕ್ಷೇತ್ರದ ಸಂಸದ ಶ್ರೀನಿವಾಸ್ ಪ್ರಸಾದ್ (76) ವಿಧಿವಶರಾಗಿದ್ದಾರೆ. ತಡರಾತ್ರಿ 1:20ಕ್ಕೆ ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಹಳೆ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರು ಕೊನೆಯುಸಿರೆಳೆದಿದ್ದಾರೆ.
ವಯೋಸಹಜ ಕಾಯಿಲೆ ಹಾಗೂ ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಏಪ್ರಿಲ್ 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಿಸದೇ ತೀವ್ರ ಹೃದಯಾಘಾತ ನಿಧನರಾಗಿದ್ದಾರೆ. ಕಳೆದೊಂದು ವಾರದಿಂದ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಶ್ರೀನಿವಾಸ್ ಪ್ರಸಾದ್ ಅವರು ಪಾರ್ಥಿವ ಶರೀರವನ್ನು ಮೈಸೂರಿನ ಜಯಲಕ್ಷ್ಮೀಪುರ ನಿವಾಸಕ್ಕೆ ರವಾನೆ ಮಾಡಲಾಗಿದೆ.
ಇಂದು ಮೈಸೂರಿನಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದ ಅವರು, ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಹಾಗೆಯೇ, ನಂಜನಗೂಡು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


