ಆಂಧ್ರಪ್ರದೇಶದಲ್ಲಿ ಟಿಡಿಪಿ, ಬಿಜೆಪಿ ಮತ್ತು ಜನಸೇನೆಯ ಎನ್ ಡಿಎ ಸರ್ಕಾರ ರಚನೆಯಾದ ಕೂಡಲೇ ಮೆಕ್ಕಾಗೆ ಭೇಟಿ ನೀಡುವ ಮುಸ್ಲಿಂ ಯಾತ್ರಾರ್ಥಿಗಳಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಟಿಡಿಪಿ ನಾಯಕ ಎನ್.ಚಂದ್ರಬಾಬು ನಾಯ್ಡು ಭಾನುವಾರ ಭರವಸೆ ನೀಡಿದ್ದಾರೆ.
ನೆಲ್ಲೂರಿನಲ್ಲಿ ಮುಸ್ಲಿಂ ಸಮುದಾಯದೊಂದಿಗಿನ ಸಂವಾದದಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ರಾಜ್ಯದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದ ಕೂಡಲೇ, ಹಜ್ ಯಾತ್ರೆಗೆ ಮೆಕ್ಕಾಗೆ ಭೇಟಿ ನೀಡುವ ಪ್ರತಿಯೊಬ್ಬ ಮುಸ್ಲಿಮರಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದರು.
ಹೈದರಾಬಾದ್ ಮುಸ್ಲಿಮರು ಇತರ ಸ್ಥಳಗಳ ತಮ್ಮ ಸಮುದಾಯದವರಿಗೆ ಹೋಲಿಸಿದರೆ ಬಹಳ ಮುಂದಿದ್ದಾರೆ.
ಇದಕ್ಕೆ ನಮ್ಮ ಪಕ್ಷದ ನೀತಿಗಳೇ ಕಾರಣ. ಈ ಹಿಂದೆಯೂ ಟಿಡಿಪಿ ಎನ್‌ಡಿಎ ಭಾಗವಾಗಿದ್ದರೂ, ಸಮುದಾಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಲು ಎಂದಿಗೂ ಅವಕಾಶ ನೀಡಲ್ಲ ಎಂದು ನಾಯ್ಡು ವಾಗ್ದಾನ ನೀಡಿದರು.
ಟಿಡಿಪಿ ಹೈದರಾಬಾದ್ ನಲ್ಲಿ ಉರ್ದು ವಿಶ್ವವಿದ್ಯಾಲಯವನ್ನು ಸ್ಥಾಪಿಸಿದೆ ಮತ್ತು ಹಜ್ ಹೌಸ್‌ಗಳನ್ನು ನಿರ್ಮಿಸಿದೆ. ಆದರೆ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಕಳೆದ 5 ವರ್ಷಗಳಲ್ಲಿ ಒಂದೇ ಒಂದು ಮಸೀದಿಯನ್ನು ನಿರ್ಮಿಸಲು ಯಾವುದೇ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296