ತುರುವೇಕರೆ: ತುರುವೇಕೆರೆ ತಾಲ್ಲೂಕಿನ ಕಸಬಾ ಹೋಬಳಿ ಕೊಡಗಿಹಳ್ಳಿ ಗ್ರಾಮದ ಜೆ.ಶಂಕರ್(50) ಇವರು ನಾಪತ್ತೆಯಾಗಿದ್ದು, ಇವರ ಸುಳಿವು ದೊರೆತರೆ ತಕ್ಷಣವೇ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ.
ಡಿಸೆಂಬರ್ 12ರಂದು ಒಕ್ಕಲಿಗರ ಸಂಘದ ಚುನಾವಣೆ ಇದೆ. ಮತದಾನ ಮಾಡಿ ಬರುತ್ತೇನೆ ಎಂದು ಬೈಕ್ ನಲ್ಲಿ ಹೊರಟಿದ್ದ ಶಂಕರ್ ಅವರು, ವಾಪಸ್ ಮನೆಗೆ ಬಂದಿಲ್ಲ ಎನ್ನಲಾಗಿದೆ. ಮನೆಯಿಂದ ತೆರಳುವ ವೇಳೆ ಅವರು ಆರೆಂಜ್ ಬಣ್ಣದ ಶರ್ಟ್, ಕಪ್ಪು ಪ್ಯಾಂಟ್ ಧರಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಶಂಕರ್ ಅವರನ್ನು ಸಂಬಂಧಿಕರ ಮನೆ ಸೇರಿದಂತೆ ವಿವಿಧೆಡೆಗಳಲ್ಲಿ ಹುಡುಕಾಡಿದರೂ ಅವರು ಪತ್ತೆಯಾಗದ ಹಿನ್ನೆಲೆಯಲ್ಲಿ ಅವರ ಪತ್ನಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಶಂಕರ್ ಅವರ ಬಗ್ಗೆ ಯಾವುದೇ ಮಾಹಿತಿಗಳು ದೊರೆತಲ್ಲಿ ಸಾರ್ವಜನಿಕರು ತಕ್ಷಣವೇ ತುರುವೇಕೆರೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08139- 287334 ಮತ್ತು ಸಬ್ ಇನ್ಸ್ ಪೆಕ್ಟರ್ ಮೊಬೈಲ್ ನಂಬರ್ 9480802965ಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700