ಗೃಹ ಸಚಿವ ಜಿ. ಪರಮೇಶ್ವರ್ ಆಪ್ತ ಹಾಗೂ ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ. ವೇಣುಗೋಪಾಲ್ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಳಗ್ಗೆಯಿಂದ ಸ್ವಲ್ಪವೂ ಬಿಡುವು ಮಾಡಿಕೊಳ್ಳದ ಅಧಿಕಾರಿಗಳು, ಅಲ್ಲಿಗೇ ತಿಂಡಿ ತರಿಸಿಕೊಂಡು ಕೆಲಸ ಮುಂದುವರಿಸಿದ್ದಾರೆ.
ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳಿಗೆ ಸಹಕರಿಸಿದ್ದಾರೆ. ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ವೇಣುಗೋಪಾಲ್ ಮನೆ ಮೇಲೆ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. 3 ಇನ್ನೋವಾ ಕಾರಿನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


