ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಪೂಜಾರಿ(23) ನೇಣು ಬಿಗಿದುಕೊಂಡು ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ. ಕಳೆದ ಏ.27 ರಂದು ಮೃತ ನಿಖಿಲ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲಾಗಿತ್ತು.
ಇದರಿಂದ ಹೆದರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಲ್ಕು ದಿನದ ಹಿಂದೆ ಲಾಡಮುಗುಳಿ ಗ್ರಾಮದಲ್ಲಿ ಜಾತ್ರೆಯೊಂದು ನಡೆದಿತ್ತು. ಈ ವೇಳೆ ಎರಡು ಸಮುದಾಯದ ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿತ್ತು. ಇದಾದ ಬಳಿಕ ಊರವರ ಸಮ್ಮುಖದಲ್ಲಿ ರಾಜಿ ಸಂಧಾನ ಕೂಡ ನಡೆದಿತ್ತು. ಬಳಿಕ ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ದ ನರೋಣಾ ಪೊಲೀಸ್ ಠಾಣೆಯಲ್ಲಿ ಇನ್ನೊಂದು ಸಮುದಾಯದ ಯುವಕರು ದೂರು ನೀಡಿದ್ದು, ಏ.27 ರಂದು ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಇದರಿಂದ ಹೆದರಿದ ನಿಖಿಲ್ ಪೂಜಾರಿ ನೇಣಿಗೆ ಶರಣಾಗಿದ್ದಾನೆ. ಇದೇ ವೇಳೆ ಕುಟುಂಬಸ್ಥರು ಹಾಗೂ ಸಮುದಾಯದವರು ನ್ಯಾಯಕ್ಕಾಗಿ ಮೃತದೇಹವನ್ನು ಕಲಬುರಗಿಗೆ ತರಲು ಮುಂದಾಗಿದ್ದಾರೆ ಎಂದು ವರದಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


