ಉತ್ತರ ಪ್ರದೇಶ: ಪಾನಮತ್ತ ಮಹಿಳೆಯೊಬ್ಬರು ನಡುರಸ್ತೆಯಲ್ಲೇ ಜಗಳ ಮಾಡಿಕೊಂಡು ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆ ಕಾನ್ಪುರದಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ನಡುರಸ್ತೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಮಹಿಳೆಯನ್ನು, ಮಹಿಳೆಯನ್ನು ನಿಯಂತ್ರಿಸಲು ಪೊಲೀಸರು ಹೈರಾಣಾದರು. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಪೊಲೀಸರು ಮಹಿಳೆಯನ್ನು ಸಮಾಧಾನ ಪಡಿಸಲು ಪ್ರಯತ್ನ ಮಾಡಿದರೂ ಸಹ, ಮಹಿಳೆ ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ಆರಂಭಿಸಿದ್ದರು. ಪುರುಷ ಪೊಲೀಸ್ ಅಧಿಕಾರಿಗಳ ಮುಂದೆ ಮಹಿಳೆ ತನ್ನ ಬಟ್ಟೆಗಳನ್ನು ತೆಗೆದು ಪೊಲೀಸ್ ಸಿಬ್ಬಂದಿಯನ್ನು ಬೆದರಿಸಲು ಪ್ರಯತ್ನಿಸಿದಳು.
ಇದರಿಂದ ಹಿಂಜರಿದ ಪೊಲೀಸರು ಮಹಿಳಾ ಕಾನ್ ಸ್ಟೇಬಲ್ ಗಳನ್ನು ಕರೆಸಿದರು. ಬಳಿಕ ಮಹಿಳೆಗೆ ನೀರು ಕೊಟ್ಟು ಆಕೆಯನ್ನು ಪೊಲೀಸ್ ಸ್ಟೇಷನ್ ಗೆ ಕರೆದೊಯ್ದು ಸಂಬಂಧಿಕರಿಗೆ ಮಾಹಿತಿ ನೀಡಿ ಕಳುಹಿಸಿಕೊಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


