ನವದೆಹಲಿ:ಕ್ಯಾಬಿನ್ ಸಿಬ್ಬಂದಿ ಏಕಾಏಕಿ ‘ಸಾಮೂಹಿಕ ಅನಾರೋಗ್ಯ ರಜೆ’ ಹಾಕಿ ಕೆಲಸಕ್ಕೆ ಗೈರಾದ ಹಿನ್ನೆಲೆ 90ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಿಗೆ ಕಾರಣಕರ್ತರು ಎನ್ನಲಾದ ಸುಮಾರು 25 ಕ್ಯಾಬಿನ್ ಸಿಬ್ಬಂದಿಗಳನ್ನು ಏರ್ ಇಂಡಿಯಾ ಸಂಸ್ಥೆ ವಜಾಗೊಳಿಸಿದೆ ಎಂದು ಏರ್ ಲೈನ್ ಮೂಲಗಳು ತಿಳಿಸಿವೆ.
ಕ್ಯಾಬಿನ್ ಸಿಬ್ಬಂದಿಯ ಲಭ್ಯತೆಯಿಲ್ಲದ ಕಾರಣ ಏರ್ ಇಂಡಿಯಾ ಸಂಸ್ಥೆ ಕನಿಷ್ಠ 60 ವಿಮಾನ ಯಾನಗಳನ್ನು ರದ್ದುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ ಮತ್ತು ಕ್ಯಾಬಿನ್ ಸಿಬ್ಬಂದಿಯ ಒಂದು ವಿಭಾಗದಿಂದ ಸಾಮೂಹಿಕ ರಜೆಗಳು ಪ್ರಯಾಣಿಕರಿಗೆ ಅಪಾರ ಅನಾನುಕೂಲತೆಯನ್ನು ಉಂಟುಮಾಡಿದೆ.
ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯು ಉಳಿದ ಕ್ಯಾಬಿನ್ ಸಿಬ್ಬಂದಿಗಳಿಗೆ ಇಂದು ಸಂಜೆ 4 ಗಂಟೆಯೊಳಗೆ ಮತ್ತೆ ಕರ್ತವ್ಯಕ್ಕೆ ಹಾಜರಾಗಬೇಕು ಇಲ್ಲದಿದ್ದರೆ ನಿಮನ್ನು ವಜಾಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


